ಕನ್ಹೇರಿ ಶ್ರೀ 
ಬೀದರ್

ಕನ್ಹೇರಿ ಶ್ರೀ ಸಮಾವೇಶಕ್ಕೆ ಅನುಮತಿ ನಿರಾಕರಣೆ

ರೇವಣಸಿದ್ದಪ್ಪ ಪಾಟೀಲ್
ಬೀದರ್: ಬಸವಕಲ್ಯಾಣದಲ್ಲಿ‌ ಜೂ.28ರಂದು ಕನ್ಹೇರಿ‌ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಆಯೋಜಿಸಲು ಉದ್ದೇಶಿಸಿದ್ದ 'ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ'ಕ್ಕೆ ಅನುಮತಿ ನೀಡಲು ತಾಲೂಕು ಆಡಳಿತ ನಿರಾಕರಿಸಿದೆ.
ಬಸವಕಲ್ಯಾಣದ ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಜಿಲ್ಲೆಯ ಮಠಾಧೀಶರು ಮತ್ತು ಭಕ್ತರು ಕಾರ್ಯಕ್ರಮ ಆಯೋಜನೆಗೆ ಅನುಮತಿ ಕೋರಿ ಅರ್ಜಿ‌ ಸಲ್ಲಿಸಿದ್ದರು. ಆದರೆ, ಕನ್ಹೇರಿ ಶ್ರೀಗಳು ಬಸವತತ್ವ ಪ್ರಚಾರಕ ಮಠಾಧೀಶರನ್ನು ಅವಾಚ್ಯ ಪದಗಳಿಂದ ನಿಂದಿಸಿ ಅವಹೇಳನ ಮಾಡಿದ ಹಿನ್ನೆಲೆ ಕರ್ನಾಟಕ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ವಿವಿಧ ಬಸವಪರ ಸಂಘಟನೆಗಳು ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದವು.
ಸಮಾವೇಶಕ್ಕೆ ಅನುಮತಿ ನೀಡಿದರೆ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇದೆ. ಹೀಗಾಗಿ ಅನುಮತಿ ನಿರಾಕರಿಸಲಾಗಿದೆ ಎಂದು ಬಸವಕಲ್ಯಾಣ ತಹಶೀಲ್ದಾರ್ ತಿಳಿಸಿದ್ದಾರೆ.