ಔರಾದ: ಶಾಸಕ ಪ್ರಭು ಚವ್ಹಾಣ ಅವರ 57ನೇ ಜನ್ಮದಿನದ ಅಂಗವಾಗಿ ಅಭಿಮಾನಿ ಬಳಗದಿಂದ ಜು.6ರಂದು ಪಟ್ಟಣದಲ್ಲಿ ವಿವಿಧ ಸಮಾಜಮುಖಿ ಹಾಗೂ ಪರಿಸರ ಸಂರಕ್ಷಣಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಶಾಸಕ ಚವ್ಹಾಣ ಅವರು ಅಂದು ಬೆಳಗ್ಗೆ 6 ಗಂಟೆಗೆ ಘಮಸುಬಾಯಿ ತಾಂಡಾದಲ್ಲಿರುವ ಮಾತಾ ಜಗದಂಬಾ ದೇವಸ್ಥಾನದಲ್ಲಿ ನಡೆಯುವ ವಿಶೇಷ ಪೂಜೆ, ಹೋಮ-ಹವನಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಬೆಳಗ್ಗೆ 8.30ಕ್ಕೆ ಔರಾದ್ ಪಟ್ಟಣದ ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವರು.
ನಂತರ ಗೋಶಾಲೆಗೆ ಭೇಟಿ ನೀಡಿ ಗೋಪೂಜೆ ನೆರವೇರಿಸಿ, ತಾಲ್ಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮತ್ತು ಔರಾದ ತಾಲ್ಲೂಕು ಕ್ರೀಡಾಂಗಣದಲ್ಲಿ 57 ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಬಳಿಕ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪಕ್ಕೆ ಆಗಮಿಸಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸುವರು. ಬೆಳಗ್ಗೆ 10 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡುವರು.
ವೇದಿಕೆ ಕಾರ್ಯಕ್ರಮದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ಪೂಜ್ಯ ಡಾ.ಬಸವಲಿಂಗ ಪಟ್ಟದೇವರು, ಪೂಜ್ಯ ಗುರುಬಸವ ಪಟ್ಟದೇವರು, ಪೂಜ್ಯ ಶಿವಾನಂದ ಶಿವಾಚಾರ್ಯರು (ತಮಲೂರು), ಪೂಜ್ಯ ಶಂಭುಲಿಂಗ ಶಿವಾಚಾರ್ಯರು (ಢೋಣಗಾಂವ), ಪೂಜ್ಯ ಶಿವಲಿಂಗ ಶಿವಾಚಾರ್ಯರು (ಹೆಡಗಾಪೂರ), ಪೂಜ್ಯ ಚಂದ್ರಶೇಖರ ಶಿವಾಚಾರ್ಯರು (ಗುಡಪಳ್ಳಿ) ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು (ಠಾಣಾಕುಶನೂರ), ಪೂಜ್ಯ ಭಂತ್ಯೆ ಬೋಧಿರತ್ನ (ಹಿಪ್ಪಳಗಾಂವ), ಪೂಜ್ಯ ಸಂಗ್ರಾಮ್ ಮಹಾರಾಮ (ನಾರಾಯಣಖೇಡ), ಪೂಜ್ಯ ಝಾಪಾ ಮಹಾರಾಜ, ಪೂಜ್ಯ ಗೋವಿಂದ ಮಹಾರಾಜ(ಸೇವಾನಗರ), ಬನ್ಸಿ ಮಹಾರಾಜ (ಮಾಳೆಗಾಂವ), ವಿನಾಯಕ ಮಹಾರಾಜ (ಚಿಮ್ಮೇಗಾಂವ) ಸೇರಿದಂತೆ ವಿವಿಧ ಮಠಗಳ ಪೂಜ್ಯರು ಹಾಗೂ ಪ್ರಮುಖ ಗಣ್ಯರು ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ. ವಿವಿಧ ಗಣ್ಯರು, ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ `ಏಕ್ ಪೇಡ್ ಮಾ ಕೆ ನಾಮ್' (ತಾಯಿಯ ಹೆಸರಲ್ಲಿ ಒಂದು ಗಿಡ) ಅಭಿಯಾನದ ಆಶಯದಂತೆ, ಶಾಸಕರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಹಿತೈಶಿಗಳು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ತಾಯಿಯ ಹೆಸರಿನಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಲಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿಯೂ ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಸಸಿ ವಿತರಣೆ ಮಾಡಲಾಗುತ್ತದೆ.
ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಭು ಬಿ.ಚವ್ಹಾಣ ಅಭಿಮಾನಿ ಬಳಗ ಪ್ರಕಟಣೆಯಲ್ಲಿ ಮನವಿ ಮಾಡಿದೆ.