ಬೀದರ್‍ನ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕ ಚಂದ್ರಕಾಂತ ಗಂಗಶೆಟ್ಟಿ ಉದ್ಘಾಟಿಸಿದರು. 
ಬೀದರ್

ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಇಲ್ಲಿಯ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಮಂಗಳವಾರ ನಡೆಯಿತು.

ಉದ್ಘಾಟನೆ ನೆರವೇರಿಸಿದ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕ ಚಂದ್ರಕಾಂತ ಗಂಗಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿ ಇಟ್ಟುಕೊಳ್ಳಬೇಕು. ಕಠಿಣ ಪರಿಶ್ರಮದ ಮೂಲಕ ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.

ನಿವೃತ್ತ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್, ಸಿದ್ಧಾರ್ಥ ಪದವಿಪೂರ್ವ ಕಾಲೇಜು ನಿವೃತ್ತ ಪ್ರಾಚಾರ್ಯ ಡಾ. ಎಸ್. ಪ್ರಭು ಮಾತನಾಡಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷ ಸಂತೋಷ್ ಪಾಟೀಲ ಅಯಾಸಪುರ ಹಾಗೂ ಬೆಂಗಳೂರಿನ ರಾಜೀವಗಾಂಧಿ ವಿಶ್ವವಿದ್ಯಾಲಯದ ಸದಸ್ಯ ಪ್ರೊ. ಚಂದ್ರಶೇಖರ ಸಾವನ್ ಅವರನ್ನು ಸನ್ಮಾನಿಸಲಾಯಿತು.

ಶಾಂತಿಕಿರಣ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ. ಚಂದ್ರಕಾಂತ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಅಭಿಷೇಕ ಪಾಟೀಲ, ನಿರ್ದೇಶಕಿ ಕಲ್ಪನಾ ಪಿ. ಮಠಪತಿ, ಪ್ರಾಚಾರ್ಯೆ ಮಂಗಲಾ ಎನ್.ಎಂ. ಇದ್ದರು.