ಬೀದರ್‌ನಲ್ಲಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಹೋರಾಟದಲ್ಲಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾತನಾಡಿದರು. ಸೋಮನಾಥ ಪಾಟೀಲ್, ರಘುನಾಥರಾವ ಮಲ್ಕಾಪುರೆ, ಬಾಬು ವಾಲಿ, ಪೀರಪ್ಪ ಯರನಳ್ಳಿ, ವಿಜಯಕುಮಾರ ಪಾಟೀಲ್ ಗಾದಗಿ, ಉಲ್ಲಾಸಿನಿ ಮುದಾಳೆ, ಲುಂಬಿಣಿ ಗೌತಮ ಇತರರಿದ್ದರು. 
ಬೀದರ್

ಸಚಿವ ಸ್ಥಾನದಿಂದ ನಾಗೇಂದ್ರ ಕೈಬಿಡಿ

ರೇವಣಸಿದ್ದಪ್ಪ ಪಾಟೀಲ್
ಬೀದರ್: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಆರೋಪಕ್ಕೆ ಸಂಬಂಸಿದಂತೆ ಬಿ.ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ನಗರದಲ್ಲಿ ಮಂಗಳವಾರ ಹೋರಾಟ ನಡೆಸಿತು.
ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಧರಣಿ ನಡೆಸಿದ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು, ಎಸ್‌ಟಿ ನಿಗಮದ ಹಣ ದುರುಪಯೋಗ ಪ್ರಕರಣದ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ ನೈತಿಕ ಹೊಣೆ ಹೊತ್ತು ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಪ್ರಕರಣ ರಾಜ್ಯಾದ್ಯಂತ ಚರ್ಚೆಯಾಗುತ್ತಿದ್ದರೂ ಡಿ.ಕೆ. ಶಿವಕುಮಾರ್ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡದಿದ್ದರೆ ಸಂಪುಟದಿಂದ ವಜಾಗೊಳಿಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರ ವಿರುದ್ಧ ಕಾನೂನು ಕ್ರಮ ಜರುಗಿಸಿ ಸಾರ್ವಜನಿಕರ ಹಣ ಸಂಪೂರ್ಣ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಪೊಲೀಸ್ ಇಲಾಖೆ ಸೇರಿ ಹಲವು ಕ್ಷೇತ್ರಗಳಲ್ಲಿ ಸುಧಾರಣೆ ಅಗತ್ಯವಿದೆ. ಆದರೆ ಕಾಂಗ್ರೆಸ್ ಸರ್ಕಾರ ಜನರ ಮೂಲಭೂತ ಸಮಸ್ಯೆಗಳನ್ನು ಬದಿಗೊತ್ತಿ ಸಂಘ-ಸಂಸ್ಥೆಗಳ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಇತರರು ಮಾತನಾಡಿದರು. ವಿಧಾನ ಪರಿಷತ್ ಮಾಜಿ ಸಭಾಪತಿ ರಘುನಾಥರಾವ ಮಲ್ಕಾಪುರೆ, ಬಿಡಿಎ ಮಾಜಿ ಅಧ್ಯಕ್ಷ ಬಾಬು ವಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಯರನಳ್ಳಿ, ಉಪಾಧ್ಯಕ್ಷ ವಿಜಯಕುಮಾರ ಪಾಟೀಲ್ ಗಾದಗಿ, ನಗರ ಮಂಡಲ ಅಧ್ಯಕ್ಷ ಶಶಿಧರ ಹೊಸಳ್ಳಿ, ಪ್ರಮುಖರಾದ ಈಶ್ವರಸಿಂರ್ ಠಾಕೂರ್, ಶ್ರೀನಿವಾಸ ಚೌಧರಿ, ಗುರುನಾಥ ಜಾಂತಿಕರ್, ರಾಜಕುಮಾರ ನೇಮತಾಬಾದ್, ದೀಪಕ್ ಗಾದಗೆ, ರಾಜಶೇಖರ ನಾಗಮೂರ್ತಿ, ರಾಜು ಚಿದ್ರಿ, ಅಶೋಕ ಹೊಕ್ರಾಣೆ, ಮಹೇಶ ಪಾಲಂ, ಮಹೇಶ್ವರ ಸ್ವಾಮಿ, ರಾಜೇಂದ್ರ ಪೂಜಾರಿ, ಜಗನ್ನಾಥ ಜಮಾದಾರ, ನರೇಶ ಗೌಳಿ, ಅನೀಲ ಪಸರಗಿ, ಉಲ್ಲಾಸಿನಿ ಮುದಾಳೆ, ಲುಂಬಿಣಿ ಗೌತಮ, ಹಣಮಂತ ಬುಳ್ಳಾ ಇತರರಿದ್ದರು.
"

ವಾಲ್ಮೀಕಿ ನಿಗಮ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಇರುವ ಪ್ರಮುಖ ಸಂಸ್ಥೆ. ನಿಗಮದ ಕೋಟ್ಯಂತರ ರೂಪಾಯಿ ಅಕ್ರಮವಾಗಿ ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿರುವ ಆರೋಪ ಅತ್ಯಂತ ಗಂಭೀರವಾಗಿದೆ. ಈ ಪ್ರಕರಣದಿಂದ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಿದ್ದು, ನೈತಿಕ ಹೊಣೆ ಹೊತ್ತು ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.| ಭಗವಂತ ಖೂಬಾಕೇಂದ್ರದ ಮಾಜಿ ಸಚಿವ

"

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ದುರುಪಯೋಗ ಪ್ರಕರಣದ ಸಂಪೂರ್ಣ ಸತ್ಯವನ್ನು ಜನರ ಮುಂದಿಡಬೇಕು. ಪ್ರಕರಣ ಸಂಬAಧ ಬಿ.ನಾಗೇಂದ್ರ ರಾಜೀನಾಮೆ ಪಡೆಯುವವರೆಗೆ ಬಿಜೆಪಿ ಹೋರಾಟ ಮುಂದುವರಿಯಲಿದೆ.| ಸೋಮನಾಥ ಪಾಟೀಲ್ಜಿಲ್ಲಾ ಬಿಜೆಪಿ ಅಧ್ಯಕ್ಷ