ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಿಸುವಂತೆ ಒತ್ತಾಯಿಸಿ ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನರಸಪ್ಪ ಜಾನಕನೋರ ಅವರು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಭೈರತಿ ಸುರೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. 
ಬೀದರ್

ಮನ್ನಳ್ಳಿಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಿಸಬೇಕು ಎಂದು ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ನರಸಪ್ಪ ಜಾನಕನೋರ ಬೇಡಿಕೆ ಮಂಡಿಸಿದ್ದಾರೆ.

ಬೆಂಗಳೂರಿನಲ್ಲಿ ಸಾರಿಗೆ ಸಚಿವ ಭೈರತಿ ಸುರೇಶ್ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.

ಹೋಬಳಿ ಕೇಂದ್ರವಾದ ಮನ್ನಳ್ಳಿಯಲ್ಲಿ ಬಸ್ ತಂಗುದಾಣ ಇಲ್ಲದ ಕಾರಣ ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ಗಮನ ಸೆಳೆದರು.

ಶಕ್ತಿ ಯೋಜನೆಯಿಂದ ಮಹಿಳೆಯರು ಸಂತಸದಲ್ಲಿದ್ದಾರೆ. ಆದರೆ, ಬಸ್ ತಂಗುದಾಣ ಇಲ್ಲದ ಕಾರಣ ಬಸ್‍ಗಳಿಗಾಗಿ ಕಾಯುತ್ತ ನಿಲ್ಲಲು ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದರು.

ಕೂಡಲೇ ಬಸ್ ತಂಗುದಾಣ ನಿರ್ಮಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದರು.