ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಬೀದರ್ ಜಿಲ್ಲಾ ಘಟಕದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರ ಖಂಡ್ರೆ ಅವರನ್ನು ರಾಜ್ಯಮಟ್ಟದ ದ್ವಿತೀಯ ಗಡಿನಾಡು ಕನ್ನಡ ಜಾಗೃತಿ ಸಮಾವೇಶಕ್ಕೆ ಆಹ್ವಾನಿಸಿದರು.
ಬೀದರ್: ಕನ್ನಡ ಸೇನೆ ಕರ್ನಾಟಕ ಸಂಘಟನೆ ವತಿಯಿಂದ ಜೂ. 19 ರಂದು ನಗರದಲ್ಲಿ ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ದ್ವಿತೀಯ ಗಡಿನಾಡು ಕನ್ನಡ ಜಾಗೃತಿ ಸಮಾವೇಶಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರ ಖಂಡ್ರೆ ಹಾಗೂ ಶಾಸಕ ರಹೀಂಖಾನ್ ಅವರನ್ನು ಸಂಘಟನೆಯ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಮಂಗಳವಾರ ಆಹ್ವಾನಿಸಿದರು.
ಶಾಲು ಹೊದಿಸಿ ಸತ್ಕರಿಸಿ, ಸಮ್ಮೇಳನದ ಆಮಂತ್ರಣ ಪತ್ರಿಕೆ ನೀಡಿದರು.
ಬೀದರ್‍ನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶ ನಡೆಯಲಿದೆ. ಸಮ್ಮೇಳನದ ಯಶಸ್ವಿಗೆ ಸಂಘಟನೆ ಪದಾಧಿಕಾರಿಗಳು ಶ್ರಮಿಸುತ್ತಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಸಂಘಟನೆಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕನ್ನಡಾಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟನೆಯ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ ಜಿ. ತಿಳಿಸಿದರು.
ಸಂಘಟನೆಯ ರಾಜ್ಯ ಉಪಾಧ್ಯಕ್ಷ ಡಾ. ರವಿ ಸ್ವಾಮಿ ನಿರ್ಣಾ, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ್ ಕೆನಾಡೆ, ಬೀದರ್ ತಾಲ್ಲೂಕು ಘಟಕದ ಉಪಾಧ್ಯಕ್ಷ ಸೂರ್ಯಕಾಂತ ರಾಂಪುರ, ತುಳಸಿ ವಾಘಮಾರೆ, ಕುಮಾರ ಆಲೂರೆ ಇದ್ದರು.