ಬೀದರ್ ತಾಲ್ಲೂಕಿನ ಮಂದಕನಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಶರಣಪ್ಪ ಮಟ್ಟೂರ ಉದ್ಘಾಟಿಸಿದರು. 
ಬೀದರ್

ಪರಿಸರ ಸಂರಕ್ಷಣೆ ಅಗತ್ಯ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಮನುಕುಲದ ಉಳಿವಿಗೆ ಪರಿಸರ ಸಂರಕ್ಷಣೆ ಅಗತ್ಯವಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಶರಣಪ್ಪ ಮಟ್ಟೂರ ಹೇಳಿದರು.
ತಾಲ್ಲೂಕಿನ ಮಂದಕನಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಮುಂದಾಗಬೇಕು. ಸಸಿಗಳನ್ನು ನೆಟ್ಟು ಬೆಳೆಸಬೇಕು ಎಂದು ತಿಳಿಸಿದರು.
ಪರಿಸರ ಸಂರಕ್ಷಣೆ ಸರ್ಕಾರ, ಕೆಲ ಸಂಘ ಸಂಸ್ಥೆಗಳ ಜವಾಬ್ದಾರಿಯಷ್ಟೇ ಅಲ್ಲ; ಪ್ರತಿಯೊಬ್ಬ ನಾಗರಿಕನ ಹೊಣೆಯಾಗಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಪಾಂಡುರಂಗ ಬೆಲ್ದಾರ್ ಹೇಳಿದರು.
ಶಿಕ್ಷಕ ಶ್ರೀನಿವಾಸ್, ದತ್ತಮ್ಮ ಮಾತನಾಡಿದರು. ಎಸ್‍ಡಿಎಂಸಿ ಅಧ್ಯಕ್ಷ ಅಹಮ್ಮದ್ ಪಾಶಾ, ಬಜಾರ್ ರಜ್ವಾನ್, ದೀನಾ ಆಂಟಿನ್, ಫಹಮಿದಾ ಬೇಗಂ, ಆಯತುಲ್ಲಾ ಉಪಸ್ಥಿತರಿದ್ದರು.
ಸಹ ಶಿಕ್ಷಕ ಝಾಕೀರ್ ಹುಸೇನ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಶಾಂತಕುಮಾರ ಜೈದೊಡ್ಡಿ ನಿರೂಪಿಸಿದರು. ವಿಜ್ಞಾನ ಶಿಕ್ಷಕಿ ಶಾಹಝಿಯಾ ತಮಕನಾತ್ ವಂದಿಸಿದರು.