ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಗೌರವಿಸಿ ಅಮೃತ ಮಹೋತ್ಸವಕ್ಕೆ ಆಹ್ವಾನಿಸಿದರು. ವಿಜಯಕುಮಾರ ಘೋದೆ, ಆಶಿಶ್ ಮೊಳಕೀರೆ ಇದ್ದರು.
ಭಾಲ್ಕಿ: ಪಟ್ಟಣದಲ್ಲಿ ಬರುವ ಏಪ್ರಿಲ್ ತಿಂಗಳಿನಲ್ಲಿ ಆಯೋಜಿಸಿದ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಆಹ್ವಾನಿಸಲಾಗಿದೆ.
ಧರ್ಮಸ್ಥಳಕ್ಕೆ ಸೋಮವಾರ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಭೇಟಿ ನೀಡಿ ಹೆಗ್ಗಡೆ ಅವರನ್ನು ಗೌರವಿಸಿ ಪೂಜ್ಯರ ಅಮೃತ ಮಹೋತ್ಸವ ಸಮಾರಂಭಕ್ಕೆ ಆಹ್ವಾನ ನೀಡಿದರು.
ಗಡಿ ಭಾಗದಲ್ಲಿ ಕಳೆದ ನಾಲ್ಕು ದಶಕಗಳಿಂದ ಪಟ್ಟದ್ದೇವರು ದಣಿವರಿಯದ ಸೇವೆ ಸಲ್ಲಿಸುತ್ತಿದ್ದಾರೆ. ಧರ್ಮ ಪ್ರಸಾರದ ಜೊತೆಗೆ ವಿದ್ಯಾ ಸಂಸ್ಥೆ ತೆರೆದು ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಗೈಯುತ್ತಿದ್ದಾರೆ. ಬಡವರು, ಕೂಲಿ ಕಾರ್ಮಿಕರು, ರೈತರು, ನಿರ್ಗತಿಕ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ಕಲ್ಪಿಸಿ ದೇಶದ ಉತ್ತಮ ನಾಗರಿಕರನ್ನಾಗಿ ರೂಪಿಸುತ್ತಿದ್ದಾರೆ. ಅಂತಹ ಪೂಜ್ಯರು 75ನೇ ವಸಂತಕ್ಕೆ ಕಾಲಿರಿಸಿದ್ದು, ಅವರ ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಭಕ್ತ ವಲಯ ನಿರ್ಧಾರ ಕೈಗೊಂಡಿದೆ. ಹೀಗಾಗಿ ತಾವುಗಳು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಿ ಭಕ್ತರಿಗೆ ದರ್ಶನ ಭಾಗ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಸುರತ್ಕಲ್ ಎನ್ಐಟಿ ಕಂಪ್ಯೂಟರ್ ವಿಭಾಗದ ಪ್ರಾಧ್ಯಾಪಕ ವಿಜಯಕುಮಾರ ಘೋದೆ, ಚನ್ನಬಸವೇಶ್ವರ ಗುರುಕುಲದ ಹಳೆಯ ವಿದ್ಯಾರ್ಥಿ ಆಶಿಶ್ ಬಸವರಾಜ ಮೊಳಕೀರೆ ಹಾಜರಿದ್ದರು.