ಚಿಟಗುಪ್ಪ ತಾಲ್ಲೂಕಿನ ಚಾಂಗಲೇರಾ ಗ್ರಾಮದ ಓಣಿಯಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಇಂಡಿಯನ್ ಕ್ರಿಶ್ಚಿಯನ್ ವೆಲ್‍ಫೇರ್ ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಸಂಜಯ್ ಜಾಗೀರದಾರ್ ಅವರು ಬೀದರ್‍ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಖಾತೆ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿದರು 
ಬೀದರ್

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯ

ರೇವಣಸಿದ್ದಪ್ಪ ಪಾಟೀಲ್
ಬೀದರ್: ಚಿಟಗುಪ್ಪ ತಾಲ್ಲೂಕಿನ ಚಾಂಗಲೇರಾ ಗ್ರಾಮದ ಬಾಳೋಬಾ ಮಂದಿರ ಸಮೀಪದ ಓಣಿಯಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಇಂಡಿಯನ್ ಕ್ರಿಶ್ಚಿಯನ್ ವೆಲ್‍ಫೇರ್ ಅಸೋಸಿಯೇಷನ್ ಒತ್ತಾಯಿಸಿದೆ.
ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಸಂಜಯ್ ಜಾಗೀರದಾರ್ ಅವರು ನಗರದಲ್ಲಿ ಮಂಗಳವಾರ ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಖಾತೆ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಓಣಿಯ ಸರ್ವ ಸಮಾಜದ ಜನ ಮಂದಿರ ಹತ್ತಿರದ ಬಾವಿಯ ನೀರು ಕುಡಿಯಲು ಬಳಸುತ್ತಿದ್ದರು. ಆದರೆ, ಬಾವಿ ಬತ್ತಿರುವುದರಿಂದ ನೀರಿನ ಸಮಸ್ಯೆ ಉಂಟಾಗಿದೆ ಎಂದು ಗ್ರಾಮಸ್ಥರು ತಮ್ಮ ಗಮನಕ್ಕೆ ತಂದಿದ್ದಾರೆ ಎಂದು ತಿಳಿಸಿದರು.
ಕೂಡಲೇ ಕೊಳವೆಬಾವಿ ಕೊರೆಸಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಕೋರಿದರು.
ಇದಕ್ಕೆ ಸ್ಪಂದಿಸಿದ ಸಚಿವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.