ಬಸವಕಲ್ಯಾಣದ ಎಸ್ಎಸ್ಕೆ ಬಸವೇಶ್ವರ ಕಲಾ, ವಿಜ್ಞಾನ, ವಾಣಿಜ್ಯ, ಸ್ನಾತಕ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಎನ್ಎಸ್ಎಸ್ ವಿಶೇಷ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ಡಾ.ಬಸವರಾಜ ಎವಲೆ, ಪ್ರಾಚಾರ್ಯ ಡಾ.ಶಿವಕುಮಾರ್ ಪಾಟೀಲ್, ಪ್ರೊ.ಡಿ.ಎಸ್.ಪಾಟೀಲ್, ಡಾ.ಸುರೇಶ ಎಚ್.ಆರ್., ಮಹಾದೇವ ದೇಗಾಂವ ಇದ್ದರು.
- ಡಾ.ಬಸವರಾಜ ಎವಲೆ ಸಲಹೆ
- ಕಲ್ಯಾಣದಲ್ಲಿ ಎನ್ಎಸ್ಎಸ್ ಶಿಬಿರ ಸಮಾರೋಪ
ಬಸವಕಲ್ಯಾಣ: ಸೇವಾ ಮನೋಭಾವನೆ ಮತ್ತು ಪರಿಸರ ಸಂರಕ್ಷಣೆಗೆ ಕಾಳಜಿ ಅವಶ್ಯಕ ಎಂದು ಎಸ್ಎಸ್ಬಿಕೆ ಕಾಲೇಜಿನ ನಿರ್ದೇಶಕ ಡಾ.ಬಸವರಾಜ ಎವಲೆ ಹೇಳಿದರು.
ನಗರದ ಎಸ್ಎಸ್ಕೆ ಬಸವೇಶ್ವರ ಕಲಾ, ವಿಜ್ಞಾನ, ವಾಣಿಜ್ಯ, ಸ್ನಾತಕ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯದಲ್ಲಿ ಬೀದರ್ ವಿವಿ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಎನ್ಎಸ್ಎಸ್ ವಿಶೇಷ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ಮಾತನಾಡಿದ ಅವರು, ಶಿಬಿರದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ವಿದ್ಯಾರ್ಥಿಯು ಕಲಿತಿರುವುದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸುತ್ತಲಿನ ಪರಿಸರದ ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಶಿವಕುಮಾರ ಪಾಟೀಲ್ ಮಾತನಾಡಿ, ಎಲ್ಲ ಶಿಬಿರಾರ್ಥಿಗಳು ಒಂದು ವಾರದ ಶಿಬಿರವನ್ನು ಸೂತ್ರದಂತೆ ಮುಂದುವರಿಸಿಕೊಂಡು ಹೋಗಬೇಕು. ಆಗ ನೀವು ಜೀವನಪೂರ್ತಿ ಇದನ್ನು ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ನಿವೃತ್ತ ಪ್ರಾಧ್ಯಾಪಕ ಪ್ರೊ. ಡಿ.ಎಸ್ .ಪಾಟೀಲ್ ಮಾತನಾಡಿ, ಶಿಬಿರಾರ್ಥಿಗಳು ಜೀವನದಲ್ಲಿ ಕಾಯಕ ಮತ್ತು ದಾಸೋಹ ಅಳವಡಿಸಿಕೊಳ್ಳುವುದು ಅವಶ್ಯಕ ಎಂದರು.
ಎನ್ಎಸ್ಎಸ್ ಅಧಿಕಾರಿಗಳಾದ ಡಾ.ಸುರೇಶ್ ಎಚ್.ಆರ್. ಹಾಗೂ ಮಹಾದೇವ ದೇಗಾಂವ ಇದ್ದರು.