ಕಮಲನಗರ: ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲು ಭಾನುವಾರ ಬೆಳಗ್ಗೆ 10ಕ್ಕೆ ಪಟ್ಟಣದ ಎಂ.ಎ. ಕಲ್ಯಾಣ ಮಂಟಪದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ದೇಶವು ಅನೇಕ ಪ್ರಧಾನಿಗಳನ್ನು ಕಂಡಿದೆ. ಆದರೆ ಸಾಮಾನ್ಯ ನಾಗರಿಕರೊಂದಿಗೆ ಪ್ರತಿ ತಿಂಗಳು ಮನ್ ಕಿ ಬಾತ್ ಮೂಲಕ ನೇರ ಸಂವಾದ ನಡೆಸುವ ಪರಂಪರೆ ಆರಂಭಿಸಿದ ಏಕೈಕ ಪ್ರಧಾನಿ ಮೋದಿ. ಈ ಕಾರ್ಯಕ್ರಮದ ಮೂಲಕ ದೇಶದ ವಿವಿಧೆಡೆ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಜತೆಗೆ ಪರಿಸರ ಸಂರಕ್ಷಣೆ, ಸ್ವಚ್ಛ ಭಾರತ, ಮಹಿಳಾ ಸಬಲೀಕರಣ, ಆತ್ಮನಿರ್ಭರ ಭಾರತ, ಶಿಕ್ಷಣ, ಆರೋಗ್ಯ, ಕೃಷಿ, ಯುವಶಕ್ತಿ, ನವೋದ್ಯಮ ಹಾಗೂ ರಾಷ್ಟ್ರ ನಿಮರ್ಾಣದಲ್ಲಿ ನಾಗರಿಕರ ಪಾಲ್ಗೊಳ್ಳುವಿಕೆಯಂತಹ ಮಹತ್ವದ ವಿಷಯಗಳ ಕುರಿತು ಮೋದಿ ಅವರು ಜನಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಇಂಥ ಮಹತ್ವದ ಕಾರ್ಯಕ್ರಮದಲ್ಲಿ ಬಿಜೆಪಿಯ ಜಿಲ್ಲಾ, ಮಂಡಲದ ಎಲ್ಲ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮನ್ ಕಿ ಬಾತ್ ವೀಕ್ಷಿಸಬೇಕು ಎಂದು ಚವ್ಹಾಣ್ ಮನವಿ ಮಾಡಿದ್ದಾರೆ.