ಬೀದರ್: ಬೀದರ್ ಶಾಸಕ ರಹೀಂಖಾನ್ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ರಾಜ್ಯದ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಕಾರ್ಮಿಕ ವಿಭಾಗದ ಬೀದರ್ ತಾಲ್ಲೂಕು ಘಟಕದ ಕಾರ್ಯದರ್ಶಿ ಸ್ವಾಮಿದಾಸ್ ಚಿಲ್ಲರ್ಗಿ ಆಗ್ರಹಿಸಿದ್ದಾರೆ.
ರಹೀಂಖಾನ್ ಜಾತ್ಯತೀತ ಹಾಗೂ ಜನ ಪರ ನಾಯಕರಾಗಿದ್ದಾರೆ. ಮೊದಲ ಹಂತದಲ್ಲಿ ಅವರಿಗೆ ಸಚಿವ ಸ್ಥಾನ ಸಿಗದಿರುವುದರಿಂದ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರಿಗೆ ಬೇಸರ ಉಂಟಾಗಿದೆ ಎಂದು ತಿಳಿಸಿದ್ದಾರೆ.
ರಹೀಂಖಾನ್ ಅವರು ಶಾಸಕ, ಸಚಿವರಾಗಿ ಬೀದರ್ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಬಹಳಷ್ಟು ಮಹತ್ವದ ಕೊಡುಗೆ ಕೊಟ್ಟಿದ್ದಾರೆ. ತಮಗೆ ನೀಡಿದ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಬೀದರ್ ನಗರಸಭೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ, 100 ಹಾಸಿಗೆ ಆಸ್ಪತ್ರೆ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ರಿಂಗ್ ರಸ್ತೆ ಮೊದಲಾದವು ರಹೀಂಖಾನ್ ಅವರ ಕೊಡುಗೆಯಾಗಿವೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಹಾಗೂ ರಾಜ್ಯದ ಅಭಿವೃದ್ಧಿಗೆ ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ಕಲ್ಪಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.