ಬೀದರ್‍ನ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಸಾವಿತ್ರಿಬಾಯಿ ಫುಲೆ, ಶೇಖ ಫಾತಿಮಾ ಹಾಗೂ ರಮಾಬಾಯಿ ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು 
ಬೀದರ್

ಮಹಿಳಾ ಸಾಕ್ಷರತೆಗೆ ಶ್ರಮಿಸಿದ ಫುಲೆ, ಫಾತಿಮಾ, ರಮಾಬಾಯಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಸಾವಿತ್ರಿಬಾಯಿ ಫುಲೆ, ಶೇಖ ಫಾತಿಮಾ ಹಾಗೂ ರಮಾಬಾಯಿ ಅಂಬೇಡ್ಕರ್ ಮಹಿಳಾ ಸಾಕ್ಷರತೆಗೆ ಶ್ರಮಿಸಿದ್ದರು ಎಂದು ಬೆಲ್ದಾಳ ಸಿದ್ಧರಾಮ ಶರಣರು ಹೇಳಿದರು.
ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ಹಾಗೂ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ನಗರದ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆದ ಸಾವಿತ್ರಿಬಾಯಿ ಫುಲೆ, ಶೇಖ ಫಾತಿಮಾ ಹಾಗೂ ರಮಾಬಾಯಿ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ದಿನದರ್ಶಿಕೆ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದುಳಿದ ವರ್ಗಗಳ ಹೆಣ್ಣು ಮಕ್ಕಳನ್ನು ಸಮಾಜದಲ್ಲಿ ಮುನ್ನೆಲೆಗೆ ತರುವಲ್ಲಿ ಇವರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ತಿಳಿಸಿದರು.
ನೇತೃತ್ವ ವಹಿಸಿದ್ದ ಧನ್ನೂರ(ಎಚ್) ಆಶ್ರಮದ ಸುವರ್ಣಾ ಮಾತಾಜಿ ಮಾತನಾಡಿ, ಹೆಣ್ಣು ಮಕ್ಕಳು ಸಾವಿತ್ರಿಬಾಯಿ ಫುಲೆ, ಶೇಖ ಫಾತಿಮಾ ಹಾಗೂ ರಮಾಬಾಯಿ ಅಂಬೇಡ್ಕರ್ ಅವರ ಆದರ್ಶ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ರಾಜ್ಯ ಅಧ್ಯಕ್ಷ ಸಂಗಮೇಶ ಖನ್ನಿನಾಯ್ಕರ್ ಮಾತನಾಡಿ, ಸಾಧಕ ಮಹಿಳೆಯರ ಜಯಂತಿ ಆಚರಣೆ ಕಾರ್ಯಕ್ರಮವು ಹೆಣ್ಣು ಮಕ್ಕಳಿಗೆ ಸಾಧನೆಗೆ ಪ್ರೇರಣೆ ಆಗಲಿದೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ಮಾತನಾಡಿ, ಕಾರ್ಯಕ್ರಮದಲ್ಲಿ 175ಕ್ಕೂ ಹೆಚ್ಚು ಶಿಕ್ಷಕರನ್ನು ಸನ್ಮಾನಿಸಲಾಗಿದೆ. 40 ಮಂದಿಗೆ ಆದರ್ಶ ದಂಪತಿ ಹಾಗೂ ಸಾವಿತ್ರಿಬಾಯಿ ಫುಲೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಹೇಳಿದರು.
ಸಾವಿತ್ರಿಬಾಯಿ ಫುಲೆ ಅವರ ಕುರಿತು ಅಖಿಲ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಪಾರ್ವತಿ ಸೋನಾರೆ ಹಾಗೂ ಶೇಖ ಫಾತಿಮಾ ಅವರ ಕುರಿತು ದಿಲ್‍ಕಿಸ್ ಫಾತಿಮಾ ವಿಶೇಷ ಉಪನ್ಯಾಸ ನೀಡಿದರು.
ಜಾಫರ್ ಶಕೀಲ್ ಅಹಮ್ಮದ್, ಪರಿಷತ್ ರಾಜ್ಯ ಉಪಾಧ್ಯಕ್ಷ ವಿಜಯಕುಮಾರ ಎ., ಮಹಾ ಪ್ರಧಾನ ಕಾರ್ಯದರ್ಶಿ ಆರ್.ಎಸ್. ಹಿರೇಗೌಡ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಳವಂತರಾವ್ ರಾಠೋಡ್, ಕೋಶಾಧ್ಯಕ್ಷ ಡಾ. ಸೋಮಶೇಖರ, ಸುವರ್ಣಾ ವಾಘಮಾರೆ, ಜಗದೇವಿ ಭೋಸ್ಲೆ, ಚಾಮುಂಡೇಶ್ವರಿ ಚೀರಾ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ವೇದಿಕೆ ಅಧ್ಯಕ್ಷ ನರಸಾರೆಡ್ಡಿ ಪೆÇಲೀಸ್ ಪಾಟೀಲ ಮತ್ತಿತರರು ಇದ್ದರು.