ಜಿಲ್ಲೆ

ಸರಣಿ ಅಪಘಾತದಲ್ಲಿ ಬಿಹಾರ ಮೂಲದ ಕಾರ್ಮಿಕ ಸ್ಥಳದಲ್ಲಿಯೇ ಸಾವು, ಇಬ್ಬರಿಗೆ ಗಾಯ

Rest of Bengaluru - Chikkaballapura - Venkatesh

ಚಿಕ್ಕಬಳ್ಳಾಪುರ: ತಾಲೂಕಿನ ಅಗಲಗುರ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಬೈಪಾಸ್​ ನಲ್ಲಿ ಟ್ರಾಕ್ಟರ್​ಗೆ ಲಾರಿ ಡಿಕ್ಕಿ ಹೊಡೆದು, ಒಬ್ಬ ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿದ್ದಾರೆ.

ಬಿಹಾರ ಮೂಲದ ಧೀರಜ್​ ಕುಮಾರ್​ (35) ಮೃತೆ. ಇಬ್ಬರು ಗಾಯಗೊಂಡಿದ್ದು ಸ್ಥಳಿಯರು ಜಿಲ್ಲಾಸ್ಪತ್ರೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ನಂದಿ ಗಿರಿಧಾಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

*ಸರಣಿ ಅಪಘಾತ

ರಾಷ್ಟ್ರೀಯ ಹೆದ್ದಾರಿಯಲ್ಲಿ ಓವರ್​ ಟೇಕ್​ ಮಾಡಲು ಯತ್ನಿಸಿದ ಲಾರಿಯು ಮೊದಲು ಖಾಸಗಿ ಬಸ್ಸಿಗೆ, ಬಳಿಕ ಟ್ರಾಕ್ಟರ್​ಗೆ ಡಿಕ್ಕಿ ಹೊಡೆದಿದೆ. ಇದರಿಂದ ಟ್ರಾಕ್ಟರ್​ ಮಗುಚಿ ಬಿದ್ದ ಹಿನ್ನೆಲೆಯಲ್ಲಿ ವಾಹನದಲ್ಲಿದ್ದ ಧೀರಜ್​ ಕುಮಾರ್​ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇನ್ನೂ ಬಸ್ಸಿನ ಹಿಂಬದಿಯ ಕಿಟಕಿ ಗಾಜುಗಳು ಪುಡಿ ಪುಡಿಯಾಗಿದ್ದು ಹೆಚ್ಚಿನ ಅವಘಡ ತಪ್ಪಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸಂಚಾರಿ ಠಾಣೆ ಮತ್ತು ನಂದಿ ಗಿರಿಧಾಮ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ಹೆದ್ದಾರಿಗೆ ಅಡ್ಡಲಾಗಿ ಮಗುಚಿ ಬಿದ್ದಿದ್ದ ವಾಹನವನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.