ಸುಳ್ಯ: ನಗರದ ಪೈಚಾರು ಸಮೀಪ ಆರ್ತಾಜೆ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸವಾರ ಐವರ್ನಾಡು ನಿವಾಸಿ ಜತ್ತಪ್ಪ ಗೌಡ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿದ್ದ ಜತ್ತಪ್ಪರನ್ನು ಆಸ್ಪತ್ರೆಗೆ ಸಾಗಿಸಿದರೂ ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮತ್ತೊಂದು ಬೈಕಿನಲ್ಲಿದ್ದ ಇಬ್ಬರು ಸವಾರರು ಗಾಯಗೊಂಡಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.