ಜಿಲ್ಲೆ

ಬೈಕ್​ ಅಪಘಾತದಲ್ಲಿ ಬಾಣಸಿಗ ಸಾವು

ಉಡುಪಿ: ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರರೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.


ಹಿರಿಯಡ್ಕದ ನಿವಾಸಿ ಅಕ್ಷಯ ಭಟ್​ (26) ಮೃತ ಯುವಕ. ಅವಿವಾಹಿತರಾಗಿದ್ದ ಇವರು, ಇಂದ್ರಾಳಿಯ ದೇವಸ್ಥಾನದಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆಗೆ ಅಡಿಗೆ ಕೆಲಸ ನಿರ್ವಹಿಸಲು ಮನೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಮಣಿಪಾಲ ಪೋಲಿಸ್​ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಶವವನ್ನು ಕೆ.ಎಂಸಿ ವೈದ್ಯಕಿಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಿದರು.