ಜಿಲ್ಲೆ

ಬೈಕ್‌ಗೆ ಮತ್ತೊಂದು ಬೈಕ್ ಡಿಕ್ಕಿ; ಓರ್ವ ಸಾವು

ರಾಣೆಬೆನ್ನೂರ: ಬೈಕ್‌ಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಓರ್ವ ಮೃತಪಟ್ಟ ಘಟನೆ ನಗರದ ಹಳೇ ಪಿ.ಬಿ. ರಸ್ತೆಯಲ್ಲಿ ಸೋಮವಾರ ಸಂಭವಿಸಿದೆ.
ತಾಲೂಕಿನ ಯರೇಕುಪ್ಪಿ ಗ್ರಾಮದ ನಾಗಪ್ಪ ಹನುಮಪ್ಪ ದೊಡ್ಡಮನಿ (60) ಮೃತ ವ್ಯಕ್ತಿ.
ಇವರು ಬೈಕ್ ಮೇಲೆ ತೆರಳುತ್ತಿದ್ದ ಸಮಯದಲ್ಲಿ ಮತ್ತೊಂದು ಬೈಕ್ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ನಾಗಪ್ಪನನ್ನು ಚಿಕಿತ್ಸೆಗಾಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.