ಸವಣೂರ: ಬೈಕ್‌ಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟ ಘಟನೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಬಳಿ ಮಂಗಳವಾರ ನಡೆದಿದೆ.
ಶಿಗ್ಗಾಂವಿ ತಾಲೂಕಿನ ಸದಾಶಿವಪೇಟೆ ನಿವಾಸಿ ಮಹೇಶ ನರಸಪ್ಪ ಚಿಗರಿ (46) ಮೃತ ದುರ್ದೈವಿ.
ಇವರು ಕಾಲೇಜ್ ಹತ್ತಿರ ತೆರಳುತ್ತಿದ್ದ ಸಮಯದಲ್ಲಿ ಬೇರೊಂದು ಬೈಕ್‌ನ ಸವಾರ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಹೇಶನನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.