ರಾಣೆಬೆನ್ನೂರ: ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ದೇವಗೊಂಡನಕಟ್ಟಿ ಬಳಿ ಎನ್ಎಚ್-&48ರಲ್ಲಿ ಸೋಮವಾರ ನಡೆದಿದೆ.
ಹರಿಹರ ತಾಲೂಕಿನ ದೂಳೆಹೊಳೆ ಗ್ರಾಮದ ಸಂತೋಷ ಪರಮೇಶ್ವರಪ್ಪ (39) ಮೃತ ಬೈಕ್ ಸವಾರ.
ಈತ ದೇವಗೊಂಡನಕಟ್ಟಿ ಬಳಿ ರಸ್ತೆ ದಾಟುತ್ತಿದ್ದ ಸಮಯದಲ್ಲಿ ಕಾರು ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಸಂತೋಷ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.