ಸವಣೂರ: ಬೈಕ್ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಟನೆ ಪಟ್ಟಣದ ಖಬರಸ್ತಾನದ ಬಳಿ ಭಾನುವಾರ ನಡೆದಿದೆ.
ಪಟ್ಟಣದ ನೂರಅಹ್ಮದ್ ಸತ್ತಾರಬೇಗ ಮಿರ್ಜಾ (64) ಮೃತ ವ್ಯಕ್ತಿ.
ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಹಿಂದಿನಿಂದ ಬಂದು ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ನೂರಅಹ್ಮದ್ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.