ಹಾವೇರಿ: ಬೈಕ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಇಲ್ಲಿಯ ಚನ್ನಮ್ಮ ವೃತ್ತದಲ್ಲಿ ಭಾನುವಾರ ಸಂಭವಿಸಿದೆ.
ಇಲ್ಲಿಯ ಶಿವಾಜಿ ನಗರದ ಮಾಳಪ್ಪ ರಾಮಪ್ಪ ಕಡಕೋಳ (60) ಮೃತ ಮಹಿಳೆ.
ಇವರು ರಸ್ತೆ ದಾಟುತ್ತಿದ್ದ ಸಮಯದಲ್ಲಿ ಬೈಕ್ ಸವಾರ ಬಂದು ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಾಳವ್ವಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.