ಜಿಲ್ಲೆ

ಬೈಕ್ ಡಿಕ್ಕಿಯಾಗಿ ಯುವಕ ಸಾವು

Belagavi

ನೇಸರಗಿ: ವಾಯುವಿಹಾರಕ್ಕೆ ಹೋಗಿದ್ದ ಯುವಕನಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಯುವಕ ಮೃತಪಟ್ಟ ಘಟನೆ ಸಮೀಪದ ವನ್ನೂರ ಗ್ರಾಮದಲ್ಲಿ
ಬೆಳಗ್ಗೆ ನಡೆದಿದೆ.

ಗ್ರಾಮದ ನಿವಾಸಿ ವಿನಾಯಕ ಬಾಳಪ್ಪ ವನ್ನೂರ (23) ಮೃತ ಯುವಕ. ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದಿದ್ದು, ಗಾಯಗೊಂಡಿದ್ದ ವಿನಾಯಕನನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ನೇಸರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದಿದ್ದು, ಗಾಯಗೊಂಡಿದ್ದ ವಿನಾಯಕನನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ನೇಸರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.