ಜಿಲ್ಲೆ

ಪಾದಚಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಬೈಕ್; ಪಾದಚಾರಿ ಸಾವು

Haveri - Kariyappa Aralikatti

ರಾಣೆಬೆನ್ನೂರ: ಬೈಕ್ ಸವಾರನೊಬ್ಬ ಪಾದಚಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ತಾಲೂಕಿನ ಮೇಡ್ಲೇರಿ ಗ್ರಾಮದ ಬಳಿ ಬುಧವಾರ ಸಂಭವಿಸಿದೆ.
ಗ್ರಾಮದ ಮಲ್ಲಪ್ಪ ನಿಂಗಪ್ಪ ಬಿರಾಳ ಮೃತ ದುರ್ದೈವಿ.
ಈತ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಹಿಂದಿನಿಂದ ಬಂದ ಬೈಕ್ ಸವಾರ ಡಿಕ್ಕಿ ಪಡೆಸಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಲ್ಲಪ್ಪನನ್ನು ಚಿಕಿತ್ಸೆಗಾಗಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.