ಕೊಳ್ಳೇಗಾಲದ ತಾಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಬೈಕ್ ರ‌್ಯಾಲಿಗೆ ಉಪವಿಭಾಗಧಿಕಾರಿ ಶಿವಮೂರ್ತಿ ಚಾಲನೆ ನೀಡಿದರು. ಶ್ರೀನಿವಾಸ್, ಗೋಪಾಲ ಕೃಷ್ಣ, ಸುಂದ್ರಮ್ಮ ಇತರರು ಇದ್ದರು.  
ಜಿಲ್ಲೆ

ಮತದಾನ ಜಾಗೃತಿಗಾಗಿ ಕೊಳ್ಳೇಗಾಲದಲ್ಲಿ ಬೈಕ್ ರ‌್ಯಾಲಿ

ಕೊಳ್ಳೇಗಾಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಹಾಗೂ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗಾಗಿ ಆಯೋಜಿಸಿದ್ದ ಬೈಕ್ ರ‌್ಯಾಲಿಗೆ ಮಂಗಳವಾರ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ ಚಾಲನೆ ನೀಡಿದರು.

ತಾಲೂಕು ಪಂಚಾಯಿತಿ ಆವರಣದಿಂದ ಪ್ರಾರಂಭವಾದ *ಬ್ಯಾಕ್‌ರ‌್ಯಾಲಿ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಮಸೀದಿ ವೃತ್ತ, ಡಾ.ರಾಜ್‌ಕುಮಾರ್ ರಸ್ತೆ, ಗುರುಕಾರ್ ವೃತ್ತ, ಎಂಜಿಎಸ್‌ವಿ ಕಾಲೇಜು ರಸ್ತೆಯಲ್ಲಿ ಸಾಗಿತು. ಇದೇ ವೇಳೆ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

ಚುನಾವಣಾ ಪರ್ವ ದೇಶದ ಗರ್ವ ಎಂಬ ಘೋಷವಾಕ್ಯದಡಿ *ಬ್ಯಾಕ್ ರ‌್ಯಾಲಿ ಮೂಲಕ ಮತದಾನದ ಜಾಗೃತಿ ಮೂಡಿಸಲಾಗುತ್ತಿದೆ. ಏ.26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಇಲ್ಲಿನ ಜನರು ಮತದಾನದ ಹಕ್ಕನ್ನು ಚಲಾಯಿಸಬೇಕೆಂಬುದು ಇದರ ಉದ್ದೇಶ ಎಂದು ಉಪವಿಭಾಗಾಧಿಕಾರಿ ಶಿವಮೂರ್ತಿ ದರು.

ತಾಲೂಕು ಪಂಚಾಯಿತಿ ಇಒ ಶ್ರೀನಿವಾಸ್ ಮಾತನಾಡಿ, ಮತದಾನ ಎಲ್ಲರ ಹಕ್ಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಬೇಕೆಂಬ ಉದ್ದೇಶದಿಂದ *ಬ್ಯಾಕ್‌ರ‌್ಯಾಲಿ ಮೂಲಕ ಅರಿವು ಮೂಡಿಸಲಾಗುತ್ತಿದೆ. 60ವರ್ಷ ಮೇಲ್ಪಟ್ಟವರಿಗೆ ಈ ಬಾರಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 317 ತೃತೀಯ ಲಿಂಗಿಗಳು ನೋಂದಣಿಯಾಗಿದ್ದು, ಶೇ.100 ರಷ್ಟು ಮತದಾನವಾಗಬೇಕೆಂಬ ದಿಸೆಯಲ್ಲಿ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಗೋಪಾಲಕೃಷ್ಣ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೇಶವಮೂರ್ತಿ, ಡಿಎಚ್‌ಒ ಡಾ.ಗೋಪಾಲ್, ಜಿಲ್ಲಾ ಪಂಚಾಯಿತಿ ಎಇಇ ಶಿವಪ್ರಕಾಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಂದ್ರಮ್ಮ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ ಇತರರಿದ್ದರು.