ಜಿಲ್ಲೆ

ಚಿಕಿತ್ಸೆ ಫಲಿಸದೆ ಬೈಕ್ ಸವಾರ ಸಾವು

ಚಾಮರಾಜನಗರ: ಕೊಳ್ಳೇಗಾಲ ಪಟ್ಟಣದ ಶ್ರೀ ಭ್ರಮರಾಂಭ ಕಲ್ಯಾಣ ಮಂಟಪದ ಮುಂಭಾಗ ರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾರೆ.


ತಾಲೂಕಿನ ಸಿದ್ದಯ್ಯನಪುರ ಗ್ರಾಮದ ಶಿವರಾಜು(63) ಮೃತ್ತ ದುರ್ದೈವಿ. ಈತ ಮೇ.11 ರಂದು ಬೈಕ್‌ನಲ್ಲಿ ಪಟ್ಟಣದ ಭ್ರಮಾರಂಭ ಕಲ್ಯಾಣ ಮಂಟಪದ ಬಳಿ ಹೋಗುವಾಗ ಲಾರಿ ನಡುವೆ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದನು. ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈ ಸೂರು ಹಾಗೂ ಬೆಂಗಳೂರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿತ್ತು. ಕೊನೆಗೆ ಚಾಮರಾಜನಗರ ಜಿಲ್ಲಾಸ್ಪತ್ರೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾನೆ.


ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ವಾರಸುದಾರರಿಗೆ ಪೊಲೀಸರು ಒಪ್ಪಿಸಿದ್ದಾರೆ.