ಜಿಲ್ಲೆ

ಬೈಕ್ ಸವಾರ ಸಾವು

ಮರಿದೇವ ಹೂಗಾರ

ಹುಬ್ಬಳ್ಳಿ: ಟಾಟಾ ಏಸ್ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಮೃತಪಟ್ಟಿದ್ದಾನೆ.
ಯರಗುಪ್ಪಿ ಗ್ರಾಮದ ಮಂಜುನಾಥ ಮಾಡೊಳ್ಳಿ ಎಂಬಾತ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಶನಿವಾರ ರಾತ್ರಿ ರಸ್ತೆ ಅಪಘಾತ ಸಂಭವಿಸಿತ್ತು. ಗಾಯಗೊಂಡಿದ್ದ ಮಂಜುನಾಥನನ್ನು ಕಿಮ್ಸ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.