ಜಿಲ್ಲೆ

ಯಾವುದೋ ವಾಹನ ಡಿಕ್ಕಿಯಾಗಿ ಬೈಕ್​ ಸವಾರ ಸಾವು

ಹಾವೇರಿ: ಯಾವುದೋ ವಾಹನ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ಕಂಚಾರಗಟ್ಟಿ ಕ್ರಾಸ್​ ಬಳಿ ಭಾನುವಾರ ನಡೆದಿದೆ.

ತಾಲೂಕಿನ ಹೌಂಶಿ ಗ್ರಾಮದ ಪ್ರವಿಣ ಗಂಗಾಧರ ಮಡಿವಾಳರ ಮೃತ ವ್ಯಕ್ತಿ.

ಈತ ಬೈಕ್​ ಓಡುತ್ತಿದ್ದ ಸಮಯದಲ್ಲಿ ಯಾವುದೋ ವಾಹನ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಕೆಳಗೆ ಬಿದ್ದ ಪ್ರವಿಣ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.