ಜಿಲ್ಲೆ

ಅಪಘಾತದಲ್ಲಿ ಬೈಕ್ ಸವಾರ ಸಾವು

ಕಲಘಟಗಿ: ತಾಲೂಕಿನ ಜುಂಜುನಬೈಲ್ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಜರುಗಿದೆ.

ಜುಂಜುನಬೈಲ್ ನಿವಾಸಿ ಪ್ರಕಾಶ ಚಾಂಗೋಜಿ ಮೃತಪಟ್ಟವ. ಕಲಘಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.