ಜಿಲ್ಲೆ

ಬೈಕ್​ಗೆ ಡಿಕ್ಕಿ ಹೊಡೆದ ಖಾಸಗಿ ಬಸ್​; ಸವಾರ ಮೃತ್ಯು

Webdesk - Manjunatha B

ಕೋಲಾರ: ಖಾಸಗಿ ಬಸ್ಸೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಅನಿಗಾನಹಳ್ಳಿ ಗೇಟ್ ಬಳಿ ನಡೆದಿದೆ.

ಮೃತ ಬೈಕ್​ ಸವಾರನನ್ನು ಅಕ್ಕಯ್ಯಮ್ಮನದಿನ್ನೆ ಗ್ರಾಮದ ಮುರಳಿ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಖಾಸಗಿ ಬಾಸ್​ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಬಂಗಾರಪೇಟೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.