ಜಿಲ್ಲೆ

ಬೈಕ್​ ಸ್ಕಿಡ್​ ಆಗಿ ಬಿದ್ದು ಸವಾರ ಸಾವು

ಹಾವೇರಿ: ಬೈಕ್​ ಸ್ಕಿಡ್​ ಆಗಿ ಬಿದ್ದು ಸವಾರ ಮೃತಪಟ್ಟ ಘಟನೆ ತಾಲೂಕಿನ ನೆಗಳೂರು ಗ್ರಾಮದಲ್ಲಿ ಭಾನುವಾರ ನಡೆದಿದೆ.

ಗ್ರಾಮದ ಸುನೀಲ ಸುರೇಶ ತಾವರೆ (46) ಮೃತ ಬೈಕ್​ ಸವಾರ.

ಈತ ಬೈಕ್​ ಸ್ಕಿಡ್​ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.