ಅಪಘಾತದಲ್ಲಿ ಮೃತಪಟ್ಟ ಸಿದ್ದರಾಜು 
ಜಿಲ್ಲೆ

ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತ

ಅಭಿನಯ್ ಎಚ್.ಎಂ

ಕೊಳ್ಳೇಗಾಲ: ತಾಲೂಕಿನ ಸತ್ತೇಗಾಲ ಗ್ರಾಮದ ಕಾವೇರಿ ನದಿಗೆ ಅಡಲಾಗಿ ನಿರ್ಮಿಸಿರುವ ನೂತನ ಸೇತುವೆ ಮೇಲೆ ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದಾನೆ.

ಹರಳೆ ಗ್ರಾಮದ ಕೂಲಿ ಕಾರ್ಮಿಕ ಸಿದ್ದರಾಜು (45) ಮೃತ್ತ ಸವಾರ. ಈತ ಎಂದಿನಂತೆ ಮಳವಳ್ಳಿಗೆ ಗಾರೆ ಕೆಲಸಕ್ಕೆ ತೆರಳಿದ್ದನು. ಕೆಲಸ ಮುಗಿಸಿ ಹಿಂದಿರುಗುವಾಗ ಸತ್ತೇಗಾಲ ಗ್ರಾಮದ ಹೊಸ ಸೇತುವೆ ಮೇಲೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಆಂಬುಲೆನ್ಸ್ ಮೂಲಕ ಕೊಳ್ಳೇಗಾಲ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದರು.

ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆಆರ್‌ಎಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ಗಾಯಾಳು ಪಟ್ಟಿದ್ದನ್ನು ದೃಢಪಡಿಸಿದರು.

ಅಪಘಾತ ಸಂಭವಿಸಿದ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಚೆಲುವರಾಜು ಭೇಟಿ ನೀಡಿದ್ದು, ಅಪಘಾತಕ್ಕೀಡಾಗಿದ್ದ ಎರಡೂ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.