ವಿಜಯವಾಣಿ ಸುದ್ದಿಜಾಲ ಧಾರವಾಡ
ಇಟ್ಟಿಗೆ ತುಂಬಿದ್ದ ಟೆಂಪೋ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ತಾಲೂಕಿನ ಮನಸೂರ ಕ್ರಾಸ್ ಬಳಿ ಸೋಮವಾರ ಸಂಜೆ ನಡೆದಿದೆ. ಹಳಿಯಾಳ ತಾಲೂಕು ಹೊಸೂರು ಗ್ರಾಮದ ವಿಠ್ಠಲ ಬೋಡೆಕರ (34) ಮೃತ ವ್ಯಕ್ತಿ. ಈತ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಎದುರಿಗೆ ಬಂದ ಟೆಂಪೋ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ವಿಠ್ಠಲ ರಸ್ತೆ ಪಕ್ಕ ಬಿದ್ದಿದ್ದ. ಸ್ಥಳೀಯರು ಆ್ಯಂಬ್ಯುಲೆನ್ಸ್ಗೆ ಕರೆ ಮಾಡಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ವಿಠ್ಠಲ ಮೃತಪಟ್ಟಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.