ಜಿಲ್ಲೆ

ಬಿಳಿಗೇರಿ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕಕ್ಕೆ ಆಗ್ರಹ

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಬಿಳಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಕ್ಷಣ ವೈದ್ಯರನ್ನು ನೇಮಕ ಮಾಡದಿದ್ದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಎಐಟಿಯುಸಿ ಜಿಲ್ಲಾಧ್ಯಕ್ಷ ಎಚ್.ಎಂ. ಸೋಮಪ್ಪ ಎಚ್ಚರಿಕೆ ನೀಡಿದ್ದಾರೆ.

ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಇದ್ದು, ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ಹಲವು ಬಾರಿ ಆರೋಗ್ಯಧಿಕಾರಿಗಳಿಗೆ ಮನವಿ ಸಲ್ಲಿಸಿ ದ್ದೇವೆ. ಕೇವಲ ಭರವಸೆ ನೀಡುತ್ತಾ ಬಂದಿರುವ ಅಧಿಕಾರಿಗಳು ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರೇ ಇರುವ ಬಿಳಿಗೇರಿ, ತಾಕೇರಿ ಹಾಗೂ ಕಿರಗಂದೂರು ಗ್ರಾಮಸ್ಥರಿಗೆ ಈ ಆರೋಗ್ಯ ಕೇಂದ್ರ ಸಹಕಾರಿ ಯಾಗಿದೆ. ಅನಾರೋಗ್ಯ ಎದುರದಾಗ ೧೫ ಕಿ.ುೀ ದೂರದ ಮಾದಾಪುರ, ಸೋಮವಾರಪೇಟೆಗೆ ತೆರಳಿ ಚಿಕಿತ್ಸೆ ಪಡೆಯಬೇಕಾದ ಅನಿವಾರ್ಯತೆ ಇದೆ. ಇದು ಬಡ ಕಾರ್ಮಿಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ತಕ್ಷಣ ವೈದ್ಯರನ್ನು ನೇಮಿಸಬೇಕು, ತಪ್ಪಿದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಹೋರಾಟ ರೂಪಿಸುವುದಾಗಿ ಸೋಮಪ್ಪ ತಿಳಿಸಿದ್ದಾರೆ.