ರಾಯಚೂರು ವೈದ್ಯಕೀಯ ಪದವಿ ಕೋರ್ಸುಗಳ ಪ್ರವೇಶಾತಿಗೆ ನಡೆದ ಪರೀಕ್ಷೆಗಳು ಬುಧವಾರ ನಗರದ ಎಸ್‌ಆರ್‌ಪಿಎಸ್ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಬಯೋ ಮೆಟ್ರಿಕ್ ಕಾರ್ಯನಿರ್ವಹಿಸದ ಕಾರಣ ಕೆಲಕಾಲ ಅಭ್ಯರ್ಥಿಗಳಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು,
ನಗರದ ಎಸ್‌ಆರ್‌ಪಿಎಸ್ ಪಿಯು ಕಾಲೇಜುಗಳಲ್ಲಿ ಪರೀಕ್ಷಾರ್ಥಿಗಳ ಗುರುತು ಖಾತರಿ ಪಡಿಸಲು ಬಯೊಮೆಟ್ರಿಕ್ ಅಳವಡಿಸಲಾಯಿತು, ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಯಿತು. ಬಯೋಮೆಟ್ರಿಕ್‌ನ ತಾಂತ್ರಿಕ ಸಮಸ್ಯೆಯಿಂದಾಗಿ ಗೊಂದಲ ಉಂಟಾಗಿದ ಅಭ್ಯರ್ಥಿಗಳನ್ನು ಪ್ರವೇಶ ದ್ವಾರದಲ್ಲೇ ನಿಲ್ಲಿಸಲಾಗಿತ್ತು.
ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ತಾಂತ್ರಿಕ ಸಮಸ್ಯೆಯ ಬಗ್ಗೆ ಜಿಲ್ಲಾಽಕಾರಿಗೆ ಮಾಹಿತಿ ನೀಡಿದ್ದರು, ತಕ್ಷಣ ಆಧಾರ್ ಕಾರ್ಡ್ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದ ಬಳಿಕ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಗಳಿಗೆ ಕಳುಹಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು.