????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ಜನನ, ಮರಣ ನೋಂದಣಿ ನಿಖರವಾಗಿರಲಿ

Mysuru - Desk - Ravikumar

ಹನೂರು: ಪ್ರತಿಯೊಬ್ಬರೂ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳುವುದರ ಮೂಲಕ ಜನನ, ಮರಣದ ನೋಂದಣಿ ನಿಖರವಾಗಿ ನಮೂದಾಗಬೇಕು ಎಂದು ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ತಿಳಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಿಂದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹಾಗೂ ಕಂಪ್ಯೂಟರ್ ಆಪರೇಟರ್‌ಗಳಿಗೆ ಜನನ, ಮರಣ ನೋಂದಣಿ ಕುರಿತು ಆಯೋಜಿಸಿದ್ದ ಪುನರ್ಮನನ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಹಿಂದೆ ಗ್ರಾಮಗಳಲ್ಲಿ ಜನನ, ಮರಣ ನೋಂದಣಿ ಕಾರ್ಯವನ್ನು ಗ್ರಾಮ ಲೆಕ್ಕಿಗರು ನಿರ್ವಹಿಸುತ್ತಿದ್ದರು. 2015ರಲ್ಲಿ ಆನ್‌ಲೈನ್ ವ್ಯವಸ್ಥೆಗೆ ಒಳಪಡಿಸಲಾಯಿತು. ಬಳಿಕ ಇದರ ಕಾರ್ಯವನ್ನು ಗ್ರಾಪಂ ಕಾರ್ಯದರ್ಶಿಗೆ ವಹಿಸಲಾಗಿದೆ. ಆದರೆ, ಮಾಹಿತಿ ಕೊರತೆ ಹಾಗೂ ಇನ್ನಿತರ ಕಾರಣಗಳಿಂದ ಜನನ, ಮರಣ ನೋಂದಣಿ ಸಮರ್ಪಕವಾಗಿ ಆಗುತ್ತಿಲ್ಲ ಎಂಬುದಾಗಿ ಸಾರ್ವಜನಿಕರಿಂದ ದೂರು ಕೇಳಿ ಬಂದಿದೆ.

ಸಮರ್ಪಕವಾಗಿ ನೋಂದಣಿ ಮಾಡುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿಯನ್ನು ರಚಿಸಲಾಗಿದ್ದು, ಈಗಾಗಲೇ ಅಗತ್ಯ ತರಬೇತಿಯನ್ನು ನೀಡಲಾಗಿದೆ. ಆದರೂ, ಜನನಕ್ಕಿಂತಲೂ ಮರಣದ ನೋಂದಣಿ ಕಾರ್ಯ ಸಮರ್ಪಕವಾಗಿ ಆಗುತ್ತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ತರಬೇತಿಯ ಪ್ರಯೋಜನ ಪಡೆದುಕೊಂಡು ಗ್ರಾಮಗಳಲ್ಲಿ ಮಾಹಿತಿ ಪಡೆದುಕೊಂಡು ನೋಂದಣಿ ಕಾರ್ಯವನ್ನು ಯಶಸ್ವಿಯಾಗಿಸಬೇಕು. ಒಂದು ವೇಳೆ ಸಮಸ್ಯೆಗಳೇನಾದರೂ ಇದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಬಗೆಹರಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಜನನ, ಮರಣ ನೋಂದಣಿ ಕಾರ್ಯದಲ್ಲಿ ನಿರ್ಲಕ್ಷ್ಯ ಸಲ್ಲದು ಎಂದು ತಿಳಿಸಿದರು.

ಬಳಿಕ ಕಾರ್ಯದರ್ಶಿ ಹಾಗೂ ಕಂಪ್ಯೂಟರ್ ಆಪರೇಟರ್‌ಗಳಿಗೆ ಜನನ, ಮರಣ ನೋಂದಣಿ ಕಾರ್ಯ ಸಂಬಂಧ ಕೈಗೊಳ್ಳಬೇಕಾದ ಕಾರ್ಯದ ಬಗ್ಗೆ ಅಗತ್ಯ ಮಾಹಿತಿ ನೀಡಲಾಯಿತು. ತಾಲೂಕು ಪಂಚಾಯಿತಿ ಇಒ ಉಮೇಶ್, ಸಾಂಖ್ಯಿಕ ಅಧಿಕಾರಿ ಲೋಕೇಶ್ ಹಾಗೂ ಇನ್ನಿತರರು ಇದ್ದರು.