ಜಿಲ್ಲೆ

ಕುವೆಂಪು ಕೃತಿಗಳಲ್ಲಿ ಬದುಕಿನ ಆಗಾಧತೆ ಅಡಕ

ಉಡುಪಿ: ಕನ್ನಡ ಸಾಹಿತ್ಯ ಲೋಕದಲ್ಲಿ ಕುವೆಂಪು ಮೇರು ಕವಿಯಾಗಿದ್ದು, ಶ್ರೀ ರಾಮಾಯಣ ದರ್ಶನಂ, ಮಲೆಗಳಲ್ಲಿ ಮದುಮಗಳು, ಕಾನೂರು ಹೆಗ್ಗಡತಿಯಂತಹ ಮುಖ್ಯ ಕಾದಂಬರಿಗಳಲ್ಲಿ ಬದುಕಿನ ಆಗಾಧತೆ ಅಡಕವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.

ಮಂಗಳವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಜಯಂತಿ ಪ್ರಯುಕ್ತ ಸರಳವಾಗಿ ನಡೆದ ವಿಶ್ವ ಮಾನವ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಕುವೆಂಪುರವರು ಕರ್ನಾಟಕದಲ್ಲಿ ಮಾತ್ರವಲ್ಲದೇ ಭಾರತದ ಸಾಹಿತ್ಯದಲ್ಲೇ ಉತ್ತಮ ಹೆಸರನ್ನು ಪಡೆದವರು. ತಮ್ಮ ಸಾಹಿತ್ಯದ ಮೂಲಕ ಕನ್ನಡಿಗರಲ್ಲಿ ಕನ್ನಡಾಭಿಮಾನ ಮೂಡಿಸಿ, ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್​, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕನ್ನಡ ಸಾಹಿತ್ಯ ಪರಿಷತ್​ನ ಮಾಧ್ಯಮ ಕಾರ್ಯದರ್ಶಿ ನರಸಿಂಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.