ಮಡಿಕೇರಿ:
ಕುಶಾಲನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಶನಿವಾರ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ವಿಜಯೇಂದ್ರ ಮತ್ತು ಕಾರ್ಯಕರ್ತರುನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು. ಬೆಂಗಳೂರಿನಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ ಕಡವಡೀರ ವಿನಯ್ ಸೋಮಯ್ಯ ಪ್ರಕರಣಕ್ಕೆ ಸಂಬAಧಿಸಿದAತೆ ಕೊಡಗಿನ ಇಬ್ಬರು ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿ ನಡೆಸಿದ ಪ್ರತಿಭಟನೆ ವೇಳೆ ಈ ಘಟನೆ ನಡೆಯಿತು.
ಇದಕ್ಕೂ ಮೊದಲು 10.30ರ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ ಬಿ.ವೈ. ವಿಜಯೇಂದ್ರ, ವಿನಯ್ ಮೃತದೇಹದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಎಷ್ಟೇ ಹೊತ್ತಾಗಲಿ ನಾವು ಇಲ್ಲಿಯೇ ಇದ್ದು ಕಾಯುತ್ತೇವೆ. ಇಬ್ಬರು ಶಾಸಕರ ವಿರುದ್ಧ ಎಫ್‌ಐಆರ್ ಆಗುವ ತನಕ ವಿನಯ್ ಅಂತ್ಯ ಸಂಸ್ಕಾರ ನಡೆಸಲು ಬಿಡುವುದಿಲ್ಲ. ಸಾಮಾಜಿಕ ಜಾಲ ತಾಣಗಳ ಅಡ್ಮಿನ್‌ಗಳ ವಿರುದ್ಧ ದೂರು ದಾಖಲು ಮಾಡುವುದು ಇದೆಂಥ ಕಾನೂನು ? ಕಾಂಗ್ರೆಸ್ ದ್ವೇಷ ರಾಜಕೀಯ ಮಾಡುತ್ತಿದೆ. ರಾಜ್ಯದಲ್ಲಿ ಪೊಲೀಸ್ ಸ್ಟೇಷನ್‌ಗಳು ಕಾಂಗ್ರೆಸ್ ಕಚೇರಿ ರೀತಿ ಕಾರ್ಯನಿರ್ವಹಿಸುತ್ತಿದೆ. ಅಮಾಯಕ ಕಾರ್ಯಕರ್ತನ ಸಾವನ್ನು ಹಗುರವಾಗಿ ಪರಿಗಣಿಸಬಾರದು. ಕಾಂಗ್ರೆಸ್‌ನಿAದ ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ.
ಕಾಂಗ್ರೆಸ್ ಕುತಂತ್ರಕ್ಕೆ ಬಿಜೆಪಿ ಕಾರ್ಯಕರ್ತರು ಮಣಿಯದೆ ಧೈರ್ಯವಾಗಿ ಎದುರಿಸ ಬೇಕು. ಒಂದು ಗಂಟೆ ಸಮಯಾವಕಾಶ ಕೊಡಲಾಗುವುದು. ಅಷ್ಟರೊಳಗೆ ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಸೇರಿಸದಿದ್ದರೆ ಮುಂದಾಗುವ ಘಟನೆಗಳಿಗೆ ಪೊಲೀಸರೇ ಹೊಣೆ ಆಗಬೇಕಾಗುತ್ತದೆ. ಪೊಲೀಸರು ಆಡಳಿತ ಪಕ್ಷದ ಕೈಗೊಂಬೆ ಆಗಿದ್ದಾರೆ. ಶಾಸಕರ ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದ್ದಾರೆ. ಪೊಲೀಸರು ಖಾಕಿಗೆ ಬೆಲೆ ಕೊಡುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಜನಸಾಮಾನ್ಯರು ಪೊಲೀಸ್ ಠಾಣೆಗೆ ನುಗ್ಗಿ ಬೆಂಕಿ ಹಚ್ಚಬೇಕಾಗುತ್ತದೆ. ಇಂಥ ಕೆಟ್ಟ ವ್ಯವಸ್ಥೆ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಕಾಂಗ್ರೆಸ್ ಶಾಸಕರು ದಾದಾಗಿರಿ ವರ್ತನೆ ಬಿಡಬೇಕು. ಇಬ್ಬರು ಶಾಸಕರ ಹೆಸರನ್ನು ಪೊಲೀಸರು ಎಫ್‌ಐಆರ್‌ಗೆ ಸೇರಿಸಲೇಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು. ಪ್ರಕರಣದ ಸಿಬಿಐ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ಮತ್ತೊಂದು ಕಡೆ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಸರ್ಕಾರ, ಮುಖ್ಯಮಂತ್ರಿ, ಜಿಲ್ಲೆಯ ಇಬ್ಬರು ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿದರು.
ನಂತರ ಮೃತದೇಹದ ಅಂತಿಮ ಸಂಸ್ಕಾರಕ್ಕೆ ಅಡ್ಡಿ ಆಗಬಾರದು ಎನ್ನುವ ಕಾರಣದಿಂದ ಮೃದೇಹವನ್ನು ಕುಟುಂಬಸ್ಥರ ವಶಕ್ಕೆ ಕೊಡಲಾಯಿತು. ಹುಟ್ಟೂರು ಸೋಮವಾರಪೇಟೆ ತಾಲೂಕು ಗೋಣಿಮರೂರುವಿನ ತೋಟದಲ್ಲಿ ಅರೆಭಾಷೆ ಒಕ್ಕಲಿಗ ಗೌಡ ಸಂಪ್ರದಾಯದAತೆ ವಿನಯ್ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಶಾಸಕ ಶ್ರೀವತ್ಸ, ರಾಜ್ಯ ಉಪಾಧ್ಯಕ್ಷÀ ಎಂ. ರಾಜೇಂದ್ರ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ನವೀನ್, ಬಿಜೆಪಿ ಮೈಸೂರು ಜಿಲ್ಲಾಧ್ಯಕ್ಷ ಎಲ್. ನಾಗೇಂದ್ರ, ಎಲ್.ಆರ್. ಮಹದೇವಸ್ವಾಮಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಪಕ್ಷದ ಪದಾಧಿಕಾರಿಗಳು ಮತ್ತು ಪ್ರಮುಖರು ಇದ್ದರು.