ಮಡಿಕೇರಿ:
ಪ್ರಧಾನಿ ನರೇಂದ್ರ ಮೋದಿ ಅವರ 11 ವರ್ಷ ಆಡಳಿತದ 'ಸಂಕಲ್ಪ ದಿಂದ ಸಾಧನೆ ವರೆಗೆ ಎಂಬ ಕಾರ್ಯಗಾರ ಮಡಿಕೇರಿಯ ಕೊಡಗು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಕಾಳಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಕಾರ್ಯಕ್ರಮಕ್ಕೆ ರಾಜ್ಯದಿಂದ ನಿಯುಕ್ತಿ ಗೊಂಡಿರುವ ಮಾಜಿ ಎಮ್‌ಎಲ್‌ಸಿ ಗಣೇಶ್ ಕಾರ್ನಿಕ್, ಕೊಡಗು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮಿಸಿದ್ದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಎಮ್ ಎಲ್ ಸಿ ಗಳಾದ ಸುನಿಲ್ ಸುಬ್ರಮಣಿ, ಎಸ್.ಜಿ. ಮೇದಪ್ಪ, ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ಚಲನ್ ಕುಮಾರ್, ವಿ.ಕೆ. ಲೋಕೇಶ್, ಈ ಕಾರ್ಯಕ್ರಮದ ಜಿಲ್ಲಾ ಸಂಚಾಲಕರುಗಳಾದ ಕಿಲನ್ ಗಣಪತಿ, ಕಾಂಗಿರ ಸತೀಶ್ (ಅಶ್ವಿನ್) ಅನಂತ್, ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಸುವಿನ್ ಗಣಪತಿ, ನಾಗೇಶ್ ಕುಂದಲ್ಪಾಡಿ, ಜಿಲ್ಲಾ ವಕ್ತಾರ ಅರುಣ್ ಕುಮಾರ್ ವಿವಿಧ ಮೋರ್ಚಾದ ಅಧ್ಯಕ್ಷರು ಸೇರಿ ದಂತೆ ಪಕ್ಷದ ಪ್ರಮುಖರು ಇದ್ದರು.