ಮಡಿಕೇರಿ:
ಈಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬAಧಿಸಿದAತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿಯಿಂದ ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಸೇರಿದಂತೆ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು. ಸರ್ಕಾರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್ ಪ್ರಚಾರದ ಆಸೆಯಿಂದ ನಡೆಸಿದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಯಿತು. ಇದಕ್ಕೆ ಕಾಂಗ್ರೆಸ್ ದುರಾಡಳಿತವೇ ಕಾರಣ. ಭದ್ರತಾ ವೈಫಲ್ಯದಿಂದ ಅಮಾಯಕರು ಬಲಿಯಾಗಬೇಕಾಯಿತು. ಘಟನೆಗೆ ಸಂಬAಧಿಸಿದAತೆ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ರವಿಕಾಳಪ್ಪ, ಐಪಿಎಲ್‌ನಲ್ಲಿ ಆರ್‌ಸಿಬಿ ಗೆಲುವಿನ ನಂತರ ಎಲ್ಲ ಕಡೆಗಳಲ್ಲೂ ವಿಜಯೋತ್ಸವ ಆಚರಿಸಲಾಗಿದೆ. ಅಲ್ಲಿಯೂ ಅಹಿತಕರ ಘಟನೆಗಳಿಗೆ ಆಸ್ಪದ ಆಗಿರಲಿಲ್ಲ. ಆದರೆ ಈ ಗೆಲುವಿನ ಕ್ರೆಡಿಟ್ ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕು ಎನ್ನುವ ಉದ್ದೇಶದಿಂದ ಪೊಲೀಸರ ಸಲಹೆ ಧಿಕ್ಕರಿಸಿ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ವಿಜಯೋತ್ಸವಕ್ಕೆ ಮುಂದಾದರು. ಈ ಸಂದರ್ಭ ಯಾವುದೇ ರೀತಿಯ ಪೂರ್ವ ಸಿದ್ಧತೆಯೂ ಇರಲಿಲ್ಲ. ಇಂಥ ಕಾರ್ಯಕ್ರಮದಲ್ಲಿ 11 ಮಂದಿ ಯುವಕರು ಬಲಿಯಾಗಬೇಕಾಯಿತು. ಇದು ಒಂದು ರೀತಿಯಲ್ಲಿ ಕೊಲೆ ಎಂದು ಆರೋಪಿಸಿದರು.
ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಆರ್‌ಸಿಬಿ ವಿಜಯೋತ್ಸವ ಸಂದರ್ಭದ ದುರಂತಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಗೋವಿಂದರಾಜ್ ನೇರ ಹೊಣೆ ಆಗಿದ್ದಾರೆ. ಕ್ರಿಕೆಟ್ ಆಟಗಾರರಿಗೆ ಸನ್ಮಾನದ ಹೆಸರಿನಲ್ಲಿ 11 ಜನರನ್ನು ಬಲಿ ಕೊಡುವ ಕೆಲಸ ಕಾಂಗ್ರೆಸ್ ಸರ್ಕಾರದಿಂದ ಆಗಿದೆ. ಹಾಗಾಗಿ ಇವರೆಲ್ಲಾ ರಾಜೀನಾಮೆ ಕೊಡಬೇಕು. ತಮ್ಮ ಮೇಲಿನ ತಪ್ಪುಗಳನ್ನು ಬೇರೆಯವರಿಗೆ ವರ್ಗಾಯಿಸಲು ಕರ್ನಾಟಕದ ಚರಿತ್ರೆಯಲ್ಲೇ ಮೊದಲ ಬಾರಿಗೆ ಐವರು ಐಪಿಎಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ. ಈ ಮೂಲಕ ಪೊಲೀಸರ ನೈತಿಕ ಸ್ಥೆöÊರ್ಯ ಕುಗ್ಗಿಲಾಗಿದೆ ಎಂದರು.
ಪ್ರತಿಭಟನೆ ನಂತರ ರಾಜೀನಾಮೆಗೆ ಒತ್ತಾಯಿಸಿ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಅವರ ಮೂಲಕ ಸಲ್ಲಿಸಲಾಯಿತು.
ಪಕ್ಷದ ಪ್ರಮುಖರಾದ ಮಹೇಶ್ ಜೈನಿ, ಅರುಣ್ ಕುಮಾರ್, ಸತೀಶ್, ಅರುಣ್ ಶೆಟ್ಟಿ, ರಾಬಿನ್ ದೇವಯ್ಯ, ಕಾಂಗೀರ ಸತೀಶ್, ನಾಗೇಶ್ ಕುಂದಲ್ಪಾಡಿ, ಪಿಎಂ. ರವಿ, ಡೀನ್ ಬೋಪಣ್ಣ ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.