ಜಿಲ್ಲೆ

ಬಿಜೆಪಿ ಸದಸ್ಯತಾ ಅಭಿಯಾನದಲ್ಲಿ ದಾಖಲೆ - ಸಂಸದ ಕ್ಯಾ.ಬ್ರಿಜೇಶ್ ಚೌಟ ಆಶಯ

Mangaluru - Hariprasad Rai



ಮಂಗಳೂರು : ಹಿಂದಿನ ಅವಧಿಯ ಬಿಜೆಪಿ ಸದಸ್ಯತಾ ಅಭಿಯಾನದಲ್ಲಿ 17 ಕೋಟಿ ಸದಸ್ಯರನ್ನು ಹೊಂದುವ ಮೂಲಕ
ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾಗಿ ಹೊರ ಹೊಮ್ಮಿತ್ತು. ದ.ಕ. ಜಿಲ್ಲೆಯ ಕಾರ್ಯಕರ್ತರು ಈ ಅಭಿಯಾನವನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಈಗ ಪುನಃ ರಾಷ್ಟ್ರವ್ಯಾಪಿ ನಡೆಯುವ ಈ ಆಭಿಯಾನದಲ್ಲಿ ಕಾರ್ಯಕರ್ತರು ಎಮ್ಮನ್ನು ತೊಡಗಿಸಿಕೊಂಡು ಹೊಸ ದಾಖಲೆ ನಿರ್ಮಿಸಬೇಕು ಎಂದು ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ಬಿಜೆಪಿ ಸದಸ್ಯತಾ ಅಭಿಯಾನ-2024 ಇದರ ಅಂಗವಾಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕ ಡಾ.ವೈ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಭಾರತಿ ಶೆಟ್ಟಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪ ಮೇಯರ್ ಸುನೀತಾ, ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ, ಕಿಶೋರ್‌ಕುಮಾರ್ ಬೊಟ್ಯಾಡಿ, ಪ್ರಮುಖರಾದ ದೇವದಾಸ ಶೆಟ್ಟಿ, ಕಸ್ತೂರಿ ಪಂಜ, ವಿಕಾಸ್ ಪುತ್ತೂರು, ನಿತೀಶ್ ಶಾಂತಿವನ, ವಿಜಯ ಕುಮಾರ್ ಶೆಟ್ಟಿ , ಬಾಲಕೃಷ್ಣ ಭಟ್, ಕೆ. , ಮೋನಪ್ಪ ಭಂಡಾರಿ, ಉಪಸ್ಥಿತರಿದ್ದರು.