ಕುಂದಾಪುರ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲಾ ವತಿಯಿಂದ ಆಯೋಜಿಸಲಾಗಿರುವ ಕರಾವಳಿಯ ಸಾಹಿತಿಗಳು, ಕಲಾವಿದರು, ಲೇಖಕರು, ಕವಿಗಳು, ಚುಟುಕು, ಬರಹಗಾರ ಸಮ್ಮೇಳನದ ಅಂಗವಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ ಮಂಡಲ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಶನಿವಾರ ಜರುಗಿತು.
ಕುಂದಾಪುರ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಮಾತನಾಡಿದರು. ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಕರಪತ್ರ ಬಿಡುಗಡೆ ಮಾಡಿದರು. ಉಡುಪಿ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವಿಜಯ್ ಕುಮಾರ್ ಕೊಡವೂರು, ಕುಂದಾಪುರ ಮಂಡಲ ಕ್ಷೇತ್ರ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್., ಒಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ತಿಂಗಳಾಯ, ಕುಂದಾಪುರ ಮಂಡಲ ಒಬಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಆಚಾರ್ಯ ಕೋಟೇಶ್ವರ, ಸುಧೀರ್ ಪೂಜಾರಿ ಕೋಟ, ಜಿಲ್ಲಾ ಒಬಿಸಿ ಪ್ರಭಾರಿ ಅರುಣ್ ಬಾಣ, ಮಂಗಳೂರು ಸಹ ಪ್ರಭಾರಿ ರಾಜೇಶ್ ಕಾವೇರಿ, ಪುರಸಭಾ ಸದಸ್ಯರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.