ಜಿಲ್ಲೆ

ಮೂರು ರಾಜ್ಯಗಳಲ್ಲಿ ಸರ್ಕಾರ ರಚನೆ; ಬಿಜೆಪಿ ವಿಜಯೋತ್ಸವ

Belagavi

ಬೆಳಗಾವಿ: ನಾಗಲ್ಯಾಂಡ್, ತ್ರಿಪುರ ಹಾಗೂ ಮೇಘಾಲಯ ರಾಜ್ಯಗಳಲ್ಲಿ ಹೊಸದಾಗಿ ಬಿಜೆಪಿ ಸರ್ಕಾರ ರಚನೆಯಾದ ಹಿನ್ನೆಲೆ ಗುರುವಾರ ನಗರದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ನೇತೃತ್ವದಲ್ಲಿ ಪಾಲಿಕೆ ಸದಸ್ಯರು, ಕಾರ್ಯಕರ್ತರು ಪಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಪ್ರಧಾನಿ ನರೇಂದ್ರ ‌ಮೋದಿ ಅವರ ಅಭಿವೃದ್ಧಿ ‌ಪರ ಆಡಳಿತ‌ಮೆಚ್ಚ ಜನರು ಬಿಜೆಪಿ ಬೆಂಬಲಿಸಿ ಗೆಲ್ಲಿಸಿದ್ದಾರೆ. ಮೂರು ರಾಜ್ಯಗಳ ಮತದಾರರಿಗೆ ಅಭಿನಂದನೆ ಸಲ್ಲಿಸಿದರು.