ವಿಜಯವಾಣಿ ಸುದ್ದಿಜಾಲ ಕುಂದಾಪುರ
ಬಿಜೆಪಿಯವರು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ ಗ್ರಾಮ ಪಂಚಾಯಿತಿಗೆ ಇದ್ದ 9/11 ಹಕ್ಕನ್ನು ಮೊಟಕುಗೊಳಿಸಿ ನಗರಾಭಿವೃದ್ಧಿ ಇಲಾಖೆಗೆ ನೀಡಲಾಗಿದೆ. ಅಕ್ರಮ-ಸಕ್ರಮದಲ್ಲಿ 30 ಸಾವಿರ ಅರ್ಜಿ ಇತ್ಯರ್ಥಕ್ಕೆ ಬಾಕಿ ಇದ್ದು, ಶಾಸಕರು ಮಾತ್ರ ಹೆಚ್ಚುವರಿ ಕಮಿಟಿ ಮಾಡಿದ ಬಗ್ಗೆ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅಸಮಾಧಾನ ಹೊರಹಾಕಿದರು.
ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಟ್‌ಬೇಲ್ತೂರಿನಲ್ಲಿ ನಡೆದ ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಸತ್ಯದರ್ಶನ ಪ್ರತಿಭಟನೆಯಲ್ಲಿ ಮಾತನಾಡಿದರು.
ಉದ್ಯೋಗ ಖಾತರಿ ಯೋಜನೆಯಡಿ ಹಣ ಬಿಡುಗಡೆಯಾಗುತ್ತಿಲ್ಲ. ಜಿಎಸ್‌ಟಿ ಪಾವತಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದರೂ ಅನುದಾನದಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಲಾಗುತ್ತಿದೆ. ಇದರ ವಿರುದ್ಧ ಆಂದೋಲನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಕುಮಾರ್, ಕಟ್‌ಬೇಲ್ತೂರು ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಮುಖರಂಡರಾದ ಚಂದ್ರ ನಾಯ್ಕ ಹೆಮ್ಮಾಡಿ, ಶೇಖರ ಬಳೆಗಾರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
94 ಸಿ ಅಡಿಯಲ್ಲಿ 140 ಜನರಿಗೆ ಹಕ್ಕುಪತ್ರ ನೀಡಲಾಗಿದೆ. ಎರಡು ತಿಂಗಳೊಳಗೆ 500 ಜನರಿಗೆ ಹಕ್ಕುಪತ್ರ ನೀಡಲು ಸೂಚನೆ ನೀಡಲಾಗಿದೆ. ಐದು ಗ್ಯಾರಂಟಿಗಳೂ ಸುಳ್ಳು ಎನ್ನುತ್ತಿದ್ದ ಬಿಜೆಪಿಗೆ ಕಾಂಗ್ರೆಸ್ ತಕ್ಕ ಪಾಠ ಕಲಿಸಿದೆ. ಅನುದಾನ ತರಿಸಿ ಕ್ಷೇತ್ರಾಭಿವೃದ್ಧಿಗೆ ಪ್ರಯತ್ನಿಸುತ್ತೇನೆ. - ಗೋಪಾಲ ಪೂಜಾರಿ, ಮಾಜಿ ಶಾಸಕ https://www.vijayavani.net/saligrama-namma-clinic-inauguration https://www.vijayavani.net/student-sanjith-m-devadiga-honored