ಸಚಿವ ಸುಧಾಕರ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಟಿ.ಡಿ.ಮೇಘರಾಜ್, ರತ್ನಾಕರ ಶೆಣೈ, ಎನ್.ಕೆ.ಜಗದೀಶ್, ಇ.ವಿಶ್ವಾಸ್, ಎಚ್.ಶಿವಾಜಿ ಮುಂತಾದವರಿದ್ದರು. 
ಜಿಲ್ಲೆ

ಸಚಿವ ಡಿ.ಸುಧಾಕರ್ ರಾಜೀನಾಮೆಗೆ ಬಿಜೆಪಿ ಆಗ್ರಹ

ಶಿವಮೊಗ್ಗ: ದಲಿತರ ಭೂಕಬಳಿಕೆ ಹಾಗೂ ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಸಚಿವ ಡಿ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೂಡಲೆ ಡಿ.ಸುಧಾಕರ್ ಅವರಿಂದ ರಾಜೀನಾಮೆ ಪಡೆಯಬೇಕೆಂದು ಒತ್ತಾಯಿಸಿ ಬಿಜೆಪಿ ಪ್ರಮುಖರು ಬುಧವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಯಲಹಂಕದಲ್ಲಿ ದಲಿತರ ಭೂ ಕಬಳಿಕೆ ಮಾಡಿರುವ ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೂಡಲೆ ಅವರನ್ನು ಬಂಧಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ನಗರದಾಧ್ಯಕ್ಷ ಎನ್.ಕೆ.ಜಗದೀಶ್, ಗ್ರಾಮಾಂತರ ಘಟಕದ ಅಧ್ಯಕ್ಷ ರತ್ನಾಕರ್ ಶೆಣೈ, ಪ್ರಮುಖರಾದ ಮಾಲತೇಶ್, ಇ.ವಿಶ್ವಾಸ್, ಮೋಹನ್, ಎಚ್.ಶಿವಾಜಿ ಇತರರಿದ್ದರು.