ಜಿಲ್ಲೆ

ಗಣ್ಯರ ಮನೆಗಳಿಗೆ ತೆರಳಿ ರಾಷ್ಟ್ರಧ್ವಜ ವಿತರಣೆ

ಗೋಪಾಲಕೃಷ್ಣ ಪಾದೂರ್

ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ‘ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ’ ಅಭಿಯಾನದ ಪ್ರಯುಕ್ತ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖರನ್ನು ಭೇಟಿ ಮಾಡಿ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಲಾಯಿತು.

ಮಣಿಪಾಲದಲ್ಲಿ ಸಾಹಿತಿ ವೈದೇಹಿ, ಮಾಹೆ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್, ಆರ್‌ಎಸ್‌ಎಸ್ ಜಿಲ್ಲಾ ಸಂಘ ಚಾಲಕ್ ನಾರಾಯಣ ಶೆಣೈ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಉಡುಪಿ ಜಿಲ್ಲಾ ಬಿಲ್ಡರ್ಸ್ ಅಸೋಸಿಯೇಶನ್ ಅಧ್ಯಕ್ಷ ಜೆರಿ ವಿನ್ಸೆಂಟ್ ಡಯಾಸ್, ’ಹರ್ಷ’ ಸಮೂಹ ಸಂಸ್ಥೆ ಆಡಳಿತ ನಿರ್ದೇಶಕ ಸೂರ್ಯಪ್ರಕಾಶ್, ಮಾನವ ಹಕ್ಕು ಪ್ರತಿಷ್ಠಾನ ಅಧ್ಯಕ್ಷ ಡಾ.ರವೀಂದ್ರನಾಥ ಶ್ಯಾನಭಾಗ್ ಮೊದಲಾದ ಗಣ್ಯರಿಗೆ ರಾಷ್ಟ್ರ ಧ್ವಜ ವಿತರಿಸಿ, ಆ. 13ರಂದು ಮುಂಜಾನೆಯಿಂದ ಆ. 15ರ ಸಾಯಂಕಾಲ ತನಕ ಪ್ರತೀ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸಂಭ್ರಮಿಸುವಂತೆ ಕರೆ ನೀಡಲಾಯಿತು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್ ಉಪಸ್ಥಿತರಿದ್ದರು.