ಜಿಲ್ಲೆ

ಮೈಸೂರಿನಲ್ಲಿ ಬಿಜೆಪಿ ವಿಭಾಗೀಯ ಸಮಾವೇಶ

ಸದೇಶ್ ಕಾರ್ಮಾಡ್

ಮೈಸೂರು: ಪಕ್ಷ ಸಂಘಟನೆಯ ಕಡೆಗೆ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರು ಹೆಚ್ಚಿನ ಗಮನ ಹರಿಸಬೇಕು ಎಂದು ಬಿಎಸ್‌ಪಿ ರಾಜ್ಯ ಉಪಾಧ್ಯಕ್ಷ ಜಾಕೀರ್ ಹುಸೇನ್ ಕರೆ ನೀಡಿದರು.

ನಗರದ ಪುರಭವನದಲ್ಲಿ ಗುರುವಾರ ಆಯೋಜಿಸಲಾಗಿದ್ದ ಬಿಎಸ್‌ಪಿ ವಿಭಾಗೀಯ ಸಮಾವೇಶದಲ್ಲಿ ಮಾತನಾಡಿ, ಪ್ರತಿ ವಿಧಾನಸಭಾವಾರು ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಪದಾಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಹೇಳಿದರು.

ಮೈಸೂರು ವಿಭಾಗ ವ್ಯಾಪ್ತಿಯಲ್ಲಿ 8 ಜಿಲ್ಲೆಗಳು ಇದ್ದು, 6 ಲೋಕಸಭಾ ಕ್ಷೇತ್ರ, 49 ವಿಧಾನಸಭಾ ಕ್ಷೇತ್ರಗಳು ಇವೆ. ಈ ಜಿಲ್ಲೆಗಳಲ್ಲಿ ಪಕ್ಷವನ್ನು ಬಲವರ್ಧನೆಗೊಳಿಸಬೇಕು. ಈ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರವಾರು ಪದಾಧಿಕಾರಿಗಳನ್ನು ನೇಮಕ ಮಾಡಿ ನಿಮಗೆ ಜವಾಬ್ದಾರಿ ವಹಿಸಲಾಗಿದೆ. ಈಗಾಗಲೇ ಬಂಗಳೂರು, ಗುಲ್ಬರ್ಗ, ಬೆಳಗಾವಿ ವಿಭಾಗದ ಸಮಾವೇಶವನ್ನು ಯಶಸ್ವಿಯಾಗಿ ನಡೆಸಲಾಗಿದೆ. ಕೊನೆಯದಾಗಿ ಮೈಸೂರು ವಿಭಾಗದ ಸಮಾವೇಶ ನಡೆಸಲಾಗುತ್ತಿದೆ ಎಂದು ಹೇಳಿದರು.

ಪಕ್ಷ ಸಂಘಟನೆಯ ದೃಷ್ಟಿಯಿಂದ ಬಿಎಸ್‌ಪಿ ರಾಜ್ಯ ಉಸ್ತುವಾರಿ ರಾಜಾರಂ ರಾಜ್ಯಕ್ಕೆ ಆಗಮಿಸಿದ್ದಾರೆ. ಅವರು ಅಷ್ಟೊಂದು ದೂರದಿಂದ ಆಗಮಿಸಿದರೂ ಸಹ ಕೆಲವು ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳು ಸಮಾವೇಶಕ್ಕೆ ಗೈರು ಹಾಜರಾಗಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಬಿಎಸ್‌ಪಿ ರಾಜ್ಯ ಉಸ್ತುವಾರಿ ರಾಜಾರಾಂ,ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ, ಪದಾಧಿಕಾರಿಗಳಾದ ಅಶೋಕ್, ನಾಗರಾಜ್, ಸುಧಾ, ಜಾಕೀರ್ ಅಲಿ ಖಾನ್, ವೆಂಕಟೇಶ್, ರಾಧಾಕೃಷ್ಣ, ಪುಟ್ಟಸ್ವಾಮಿ, ನಾಗೇಶ್, ಹರೀಶ್, ಭರತ್ ಕುಮಾರ್ ಗೌಡ, ಇಮ್ತಿಯಾಜ್, ಚೆಲುವರಾಜ್, ಬಸವಣ್ಣ, ಪರಮೇಶ್ವರ್, ಲಕ್ಷ್ಮಣ್, ಚಂದ್ರಶೇಖರ್ ಇದ್ದರು.