ಜಿಲ್ಲೆ

ಬಿಜೆಪಿ ಉಚ್ಚಾಟಿತ ಬಸನಗೌಡ ಪಾಟೀಲ್ ಯತ್ನಾಳ್ ಗೆ ಇತಿಮಿತಿಯಲ್ಲಿರಲು ಸಲಹೆ ನೀಡಲಾಗಿತ್ತು!

ಚಿಕ್ಕಬಳ್ಳಾಪುರ: ಬಿಜೆಪಿ ಪಕ್ಷದಿಂದ ಜನಪ್ರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ದುರದೃಷ್ಟಕರ. ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಬಹಿರಂಗವಾಗಿ ಮಾರಕವಾದ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ. ಸಾರ್ವಜನಿಕವಾಗಿ ಇತಿಮಿತಿಗಳಲ್ಲಿ ಇರಬೇಕಾಗುತ್ತದೆ. ಇದರ ಬಗ್ಗೆ ಅವರಿಗೆ ಕಿವಿ ಮಾತು ಹೇಳಲಾಗಿತ್ತು ಎಂದು ಸಂಸದ ಡಾ ಕೆ.ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಪ್ರತಿಯೊಬ್ಬರೂ ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸಬೇಕು. ಮುಂಬರುವ ದಿನಗಳಲ್ಲಿ ಉಚ್ಚಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್  ಸೇರಿಕೊಳ್ಳಲಾಗುತ್ತದೆಯೇ? ಎನ್ನುವುದನ್ನು ಕಾದು ನೋಡಬೇಕು, ಅವರಿದ್ದರೆ ಪಕ್ಷಕ್ಕೆ ಒಳ್ಳೆಯದು, ಲಾಭವಾಗುತ್ತದೆ ಎಂದು ತಿಳಿಸಿದ್ದಾರೆ.

*ಹೆದ್ದಾರಿ ಕಾಮಗಾರಿ ಪರಿಶೀಲನೆ
ಚಿಕ್ಕಬಳ್ಳಾಪುರ ತಾಲೂಕಿನ ಚದಲಪುರ ಕ್ರಾಸ್, ಷಾ ಶೀಬ್ ಇಂಜಿನಿಯರಿಂಗ್ ಕಾಲೇಜ್ ಬಳಿ ಕೈಗೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಸಂಸದರು ಪರಿಶೀಲಿಸಿದರು.
ಬೆಂಗಳೂರು - ಹೈದರಬಾದ್ ಮಾರ್ಗದ ರಾಷ್ಟ್ರೀಯ ಹೆದ್ದಾರಿ 55 ರಲ್ಲಿ 52 ಕೋಟಿ ರೂ ವೆಚ್ಚದ ಮೇಲ್ಸೇತುವೆ, ರಸ್ತೆ ನಿರ್ಮಾಣದ ಕೆಲಸವನ್ನು ತ್ವರಿತವಾಗಿ ಮುಗಿಸಬೇಕು. ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಸಮಾನ ಮನಸ್ಕರ ವೇದಿಕೆ, ನಾಗರಿಕ ಹಿತ ರಕ್ಷಣಾ ಸಮಿತಿಯು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿನ ಸಮಸ್ಯೆಗಳ ಬಗ್ಗೆ ಸಂಸದರ ಗಮನ ಸೆಳೆಯಿತು.