ಹುಬ್ಬಳ್ಳಿ : ಬಿಜೆಪಿ ಧಾರವಾಡ ಗ್ರಾಮೀಣ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಶನಿವಾರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು.
ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ಫಲಾನುಭವಿಗೆ ತಲುಪಿಸುವ ಜವಾಬ್ದಾರಿ ಸ್ಥಳೀಯ ಸಂಸ್ಥೆಗಳದ್ದಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹೆಚ್ಚಿನ ಚಟುವಟಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಅವೆಲ್ಲ ಗ್ರಾಮೀಣ ಜನರಿಗೆ ತಲುಪಿಸುವ ಜವಾಬ್ದಾರಿ ಗ್ರಾಮ ಪಂಚಾಯಿತಿ ಮೇಲಿದೆ ಎಂದು ತಿಳಿಸಿದರು.
ಜಿಲ್ಲೆಯ 143 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿ 1,080 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.
ಈ ಸಮಾರಂಭದಲ್ಲಿ ಸ್ವಾತಂತ್ರೊ್ಯೕತ್ಸವದ 75 ನೇ ಅಮೃತ ಮಹೋತ್ಸವದ ಅಂಗವಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ರಾಷ್ಟ್ರಧ್ವಜ ಹಾಗೂ ಸದಸ್ಯರಿಗೆ ನೂತನವಾಗಿ ನಿರ್ವಿುಸಿದ ಸಂಸತ್ ಭವನದ ನೆನಪಿನ ಕಾಣಿಕೆ ನೀಡಿ, ಕೇಂದ್ರ ಸಚಿವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಬಿಜೆಪಿಯ ಬಸವರಾಜ ಕುಂದಗೋಳಮಠ, ಷಣ್ಮುಖ ಗುರಿಕಾರ, ನಾಗರಾಜ ಛಬ್ಬಿ, ಶಶಿಮೌಳಿ ಕುಲಕರ್ಣಿ, ಗುರು ಪಾಟೀಲ, ಸದಾನಂದ ಚಿಂತಾಮಣಿ, ಶಿವಾನಂದ ಗುಂಡಗೋವಿ ಹಾಗೂ ಇತರರು ಇದ್ದರು.