???????????????????????????????????? 
ಜಿಲ್ಲೆ

ಬಿಜೆಪಿ, ಹಿಂದುಪರ ಸಂಘಟನೆಗಳ ಪ್ರತಿಭಟನೆ

ಲಲಾಟಾಕ್ಷ ಎಸ್

ಕೆ.ಆರ್.ನಗರ: ತಾಲೂಕಿನ ಬಾಲೂರು ಒಂಟಿಮನೆ ಗ್ರಾಮದ ಪುನೀತ್ ಸಾವಿಗೆ ಕಾರಣರಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ತಾಲೂಕು ಬಿಜೆಪಿ ಘಟಕ ಮತ್ತು ಹಿಂದುಪರ ಸಂಘಟನೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.


ಪಟ್ಟಣದ ಆದಿಶಕ್ತಿ ತೋಪಮ್ಮ ದೇವಸ್ಥಾನದ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ನಂತರ ಮೆರವಣಿಗೆಯ ಮೂಲಕ ಸರ್ಕಾರ ಮತ್ತು ಪೊಲೀಸ್ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೈಸೂರು-ಹಾಸನ ರಸ್ತೆಯ ಮಾರ್ಗವಾಗಿ ತಾಲೂಕು ಆಡಳಿತಸೌಧಕ್ಕೆ ತೆರಳಿ ಕೆಲಕಾಲ ಪ್ರತಿಭಟಿಸಿದರು.
ಬಜರಂಗದಳದ ಮೈಸೂರು- ಗ್ರಾಮಾಂತರ ಸಂಯೋಜಕ ಚಂದ್ರಮೌಳಿ ಮಾತನಾಡಿ, ಬಾಲೂರು ಒಟ್ಟಿಮನೆ ಗ್ರಾಮದಲ್ಲಿ ವಾಸವಾಗಿದ್ದ ಯುವಕ ಪುನೀತ್ ಮಾ.13ರಂದು ತಮ್ಮ ಮನೆಯ ಹಿಂಭಾಗದ ಜಮೀನಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪಟ್ಟಣದ ಮುಸ್ಲಿಂ ಬಡಾವಣೆಯ ಯುವಕರ ಗುಂಪು ಆತನನ್ನು ಕೊಲೆ ಮಾಡಿದೆ ಎಂದು ಆರೋಪಿಸಿದರು.


ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಪುನೀತ್ 15 ದಿನಕ್ಕೊಮ್ಮೆ ಹುಟ್ಟೂರಿಗೆ ಬಂದು ಹೋಗುತ್ತಿದ್ದ. ಕೆಲವು ದಿನಗಳ ಹಿಂದೆ ವಿನಾಕಾರಣ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿ 6 ರಿಂದ 8 ಮುಸ್ಲಿಂ ಯುವಕರು ತೀವ್ರವಾಗಿ ಹಲ್ಲೆ ನಡೆಸಿದ್ದರು. ಆ ದೃಶ್ಯಗಳು ಸಿಸಿ ಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಈ ಬಗ್ಗೆ ಪುನೀತ್ ಸ್ನೇಹಿತರನ್ನು ವಿಚಾರಿಸಿದಾಗ ಈ ಹಿಂದೆಯೂ ಹಲವು ಬಾರಿ ಮುಸ್ಲಿಂ ಯುವಕರ ಗುಂಪು ಬೈಕ್ ತಡೆದು ಅಮಾನವೀಯವಾಗಿ ಹಲ್ಲೆ ನಡೆಸಿ ಪುನೀತ್ ಮತ್ತು ಆತನ ತಾಯಿಯನ್ನು ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ ಎಂಬುದು ತಿಳಿದುಬಂದಿದೆ ಎಂದರು.
ರಾಜ್ಯದೆಲ್ಲೆಡೆ ಹಿಂದು ವಿದ್ಯಾರ್ಥಿಗಳು ಹಾಗೂ ಯುವಕರನ್ನು ಗುರಿಯಾಗಿಸಿಕೊಂಡು ಮುಸ್ಲಿಮರು ಹಲ್ಲೆ, ಕೊಲೆ ಮಾಡುತ್ತಿರುವ ಪ್ರಕರಣಗಳು ಪದೇ ಪದೆ ಜರುಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರವೇ ಪ್ರೋತ್ಸಾಹ ನೀಡುತ್ತಿದೆ. ಸಾವಿಗೆ ಕಾರಣರಾದವರನ್ನು ಬಂಧಿಸಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದರು.


ನಂತರ ಶಿರಸ್ತೇದಾರ್ ಅಸ್ಲಾಂ ಪಾಷಾಗೆ ಮನವಿ ಸಲ್ಲಿಸಿದರು. ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಧರ್ಮ, ಜಿಲ್ಲಾ ಆರ್ಥಿಕ ಪ್ರಕೋಷ್ಠ ಸಹ ಸಂಚಾಲಕ ಕೃಷ್ಣಯ್ಯ, ಅರೆಕೆರೆ ಮಧು, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಕೆಂಚಿಮಂಜು, ಮೃತನ ತಾಯಿ ಭಾರತೀ, ಹಿಂದುಪರ ಸಂಘಟನೆಗಳ ಪದಾಧಿಕಾರಿಗಳಾದ ಕಿಶೋರ್, ಮಧು ಗದ್ದಿಗೆ, ವಿನಯ್ ಶೆಟ್ಟಿ, ಸಂತೋಷ್, ಬಸವರಾಜು ಭಾಗವಹಿಸಿದ್ದರು.