ಜಿಲ್ಲೆ

ಜಗದೀಶ್ ಶೆಟ್ಟರ್ ಗೆ ಗೋವಾ, ಮಹಾ ಸಿಎಂ, ಡಿಸಿಎಂ ಸಾಥ್!

ಮಂಜುನಾಥ ಕೋಳಿಗುಡ್ಡ


-ಜ.17ರಂದು ನಾಮಪತ್ರ ಸಲ್ಲಿಸಲಿರುವ ಶೆಟ್ಟರ್
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಏ.17ರಂದು ನಾಮಪತ್ರ ಸಲ್ಲಿಸುತ್ತಿದ್ದು,  ಅವತ್ತು ನೆರೆಯ ಮಹಾರಾಷ್ಟ್ರ ದ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಪಢ್ನವಿಸ್, ಗೋವಾ ಸಿಎಂ ಸಾವಂತ್ ಸೇರಿಂದ ಬಿಜೆಪಿ ರಾಷ್ಟ್ರೀಯ ನಾಯಕರು ಸಾಥ್ ನೀಡಲಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಪ್ರತಿ ನಿತ್ಯ ಬೆಳಗ್ಗೆ ಚಾಯ್ ಪೇ ಚರ್ಚಾ ನಡೆಸಲಾಗುತ್ತಿದೆ. ಬೆಳಗಾವಿ ಲೋಕಸಭಾದಲ್ಲಿ ಅಲ್ಲಲ್ಲಿ ಸಮಾವೇಶ ನಡೆಸಲಾಗುತ್ತಿದೆ. ಜನರಿಂದ ಉತ್ತಮ ಸ್ಪಂದೆನೆಯೂ ಸಿಗುತ್ತಿದೆ. ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಉತ್ತಮವಾದ ಕೆಲಸ ಮಾಡುತ್ತಿದ್ದಾರೆ. ಏ‌.17 ರಂದು ನಾಮಪತ್ರ ಸಲ್ಲಿಕೆ ಮಾಡಲಾಗುತ್ತಿದೆ‌. ಈ ಸಂದರ್ಭದಲ್ಲಿ ನೆರೆಯ ರಾಜ್ಯಗಳ ಮುಖ್ಯಮಂತ್ರಿ, ಸಚಿವರು ಸೇರಿ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದರು.